ತುಮಕೂರು : ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಹಿಂದಿನ ಸೋಲನ್ನು ಅರಗಿಸಿಕೊಳ್ಳಲಾಗದೆ, ವಿಚಿತ್ರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಸ್ಪರ್ಧೆಯಿಂದ ದೊಡ್ಡ ಶಾಕ್ ನೀಡಿದ್ದಾರೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿದ್ರೆ ಸಾಕು ಅನ್ನೋ ಯೋಚನೆಯಲ್ಲಿದ್ದೇವೆ ಎಂದರು.