ಕರ್ನಾಟಕ

karnataka

ETV Bharat / state

ರಾಜ್ಯದ ಬಿಜೆಪಿ ಸರ್ಕಾರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಿದೆ:  ಮುರುಳೀಧರ ಹಾಲಪ್ಪ - ಮುರುಳೀಧರ ಹಾಲಪ್ಪ

ತುಮಕೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಕೌಶಲ್ಯ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಬಿಜೆಪಿ ಸರ್ಕಾರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಿದೆ:  ಮುರುಳೀಧರ ಹಾಲಪ್ಪ

By

Published : Oct 11, 2019, 5:10 AM IST

ತುಮಕೂರು: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಮಾಧ್ಯಮದವರನ್ನು ವಿಧಾನಸಭೆಯ ಕಲಾಪಗಳಿಗೆ ಬಾರದಂತೆ ಮಾಡುವ ಮೂಲಕ ಸಂವಿಧಾನ ನೀಡಿರುವಂತಹ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಿದೆ, ಈ ದಿನವನ್ನು ಕರಾಳ ದಿನ ಎನ್ನಬಹುದು ಎಂದು ಕರ್ನಾಟಕ ಕೌಶಲ್ಯ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.

ರಾಜ್ಯದ ಬಿಜೆಪಿ ಸರ್ಕಾರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಿದೆ: ಮುರುಳೀಧರ ಹಾಲಪ್ಪ

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಒಡೆತನದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲಿನ ಐಟಿ ದಾಳಿಯನ್ನು ಸ್ವಾಗತಿಸುತ್ತೇನೆ, ಆದರೆ ಇದುವರೆಗೂ ಆದಾಯ ತೆರಿಗೆ ಇಲಾಖೆ ನಡೆಸಿದ ಒಂದು ದಾಳಿಯೂ ಅಂತಿಮ ಹಂತ ತಲುಪಿಲ್ಲ. ಇದರ ಹಿಂದಿನ ಮರ್ಮ ಏನು ಎಂಬುದು ಜನರಿಗೆ ಅರ್ಥವಾಗಿದೆ. ಜನರೇ ಐಟಿ ಇಡಿ ದಾಳಿಗಳನ್ನು ರಾಜಕೀಯ ಪ್ರೇರಿತ ಎಂದು ಮಾತನಾಡಿಕೊಳ್ಳುವ ಪರಿಸ್ಥಿತಿ ತಲುಪಿದೆ. ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ರಾಜ್ಯ ಚುನಾವಣಾ ಆಯೋಗ ರಾಜ್ಯದ ಎಲ್ಲಾ ಪದವೀಧರ ಕ್ಷೇತ್ರಗಳ ಮತದಾರರ ನೋಂದಣಿ ಕಾರ್ಯವನ್ನು ಪ್ರಾರಂಭಿಸಿದ್ದು, ತುಮಕೂರು ಜಿಲ್ಲೆ ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಜಿಲ್ಲೆಯ ಪದವೀಧರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ, ಹಾಗಾಗಿ ಯುವಜನರು ಅದರಲ್ಲೂ ವಿದ್ಯಾವಂತರು, ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಅದು ಯಶಸ್ವಿಯಾಗಲು ಸಾಧ್ಯ, ಈ ಹಿನ್ನೆಲೆಯಲ್ಲಿ 2016ರ ಒಳಗೆ ಪದವಿ ಪಡೆದಿರುವ ಎಲ್ಲಾ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಇಂದು ಬಡತನ, ನಿರುದ್ಯೋಗ, ಆರ್ಥಿಕ ಕುಸಿತ, ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳು ಮೂಲೆ ಗುಂಪಾಗಲು ವಿದ್ಯಾವಂತ ಯುವಜನರು ಚುನಾವಣೆಯಿಂದ ದೂರ ಉಳಿದಿರುವುದು ಕಾರಣ. ಇದರ ಲಾಭ ಪಡೆದ ಬಿಜೆಪಿ ತನ್ನ ಅಜೆಂಡಾಗಳ ಮೂಲಕ ಜನರಲ್ಲಿ ಭಾವನಾತ್ಮಕ ವಿಚಾರಗಳನ್ನು ತುಂಬಿ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಆಡಳಿತ ನಡೆಸಲು ಬಾರದೆ ದೇಶವನ್ನು ಅಧೋಗತಿಗೆ ತಂದು ಕೂರಿಸಿದೆ. ಮುಂದಿನ ದಿನಗಳಲ್ಲಿ ಭಾರತದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಈ ಎಲ್ಲ ಅವಾಂತರಗಳಿಗೆ ಕೊನೆ ಹಾಡಬೇಕೆಂದರೆ ವಿದ್ಯಾವಂತರು ಉತ್ತಮ ಚುನಾಯಿತ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು.

ABOUT THE AUTHOR

...view details