ತುಮಕೂರು : ಜ್ಯುವೆಲ್ಲರಿ ಶಾಪ್ ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಅಂತರ್ ರಾಜ್ಯ ದರೋಡೆಕೋರರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರ ಮೂಲದ ದಿಗಂಬರ್ ಕಿರಣ್ ಕುಂಡ್ಲಿಕ್ ಸುಳೆ, ರಾಜಸ್ಥಾನ ಮೂಲದ ಸಿದ್ದನಾಥ ರಾಮಚಂದ್ರ ಪಡಾಲ್ಕರ್, ಹರ್ಷವರ್ಧನ್ ಬಾಳಿರಾಂ ಮಾನೆ, ವಿವೇಕ್ ದೌಲತ್ ರಾವ್ ಮೇಟ್ ಕರಿ ಹಾಗೂ ಓರ್ವ ಬಾಲಪರಾಧಿ ತಿಳಿದುಬಂದಿದೆ. ಬಂಧಿತರಿಂದ 53,33,000 ರೂ ಮೌಲ್ಯದ 1 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ದಿಗಂಬರ್ ಕಿರಣ್ ನಗರದ ಗೋಲ್ಡ್ ಟೆಸ್ಟಿಂಗ್ ಶಾಪ್ ನಲ್ಲಿ ಕೆಲಸಕ್ಕಿದ್ದನು. ಈ ಮಧ್ಯೆ ರಜೆ ನಿಮಿತ್ತ ರಾಜಸ್ಥಾನಕ್ಕೆ ಹೋದಾಗ ತನ್ನ ಸ್ನೇಹಿತರಿಗೆ ಸುಲಭವಾಗಿ ಹಣ ಗಳಿಸುವ ಬಗ್ಗೆ ಮಾಹಿತಿ ನೀಡಿದ್ದನು. ನಗರದಲ್ಲಿ ಓರ್ವ ವ್ಯಕ್ತಿ ಬೆಂಗಳೂರಿನಿಂದ ತುಮಕೂರಿಗೆ ಚಿನ್ನಾಭರಣಗಳನ್ನು ಸರಬರಾಜು ಮಾಡುತ್ತಿದ್ದಾನೆ. ಆತನನ್ನು ದರೋಡೆ ಮಾಡಿದರೆ ಸುಲಭವಾಗಿ ಹಣ ಗಳಿಸಬಹುದು ಎಂದು ತನ್ನ ಗೆಳೆಯರಿಗೆ ತಿಳಿಸಿದ್ದ . ಯೋಜನೆಯಂತೆ ಈ ಆರೋಪಿಗಳು ನಗರದಲ್ಲಿ ಲಾಡ್ಜ್ ನಲ್ಲಿ ತಂಗಿ ದರೋಡೆ ಮಾಡಲು ಕಾಯುತ್ತಿದ್ದರು.