ಕರ್ನಾಟಕ

karnataka

ETV Bharat / state

ಆಯುರ್ವೇದ ಪದ್ಧತಿ ಪ್ರಚಾರಪಡಿಸುವಲ್ಲಿ ನಾವೆಲ್ಲರೂ ವಿಫಲ.. ಡಾ.ವೀರಭದ್ರಯ್ಯ - ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಆಯುರ್ವೇದ ದಿನಾಚರಣೆ

ನಗರದ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಇಂದು 4ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಆಚರಿಸಲಾಗಿದೆ.

ಆಯುರ್ವೇದ ದಿನಾಚರಣೆ

By

Published : Oct 25, 2019, 9:34 PM IST

ತುಮಕೂರು:ನಮ್ಮ ದೇಶದಲ್ಲಿಯೇ ಹುಟ್ಟಿದ ಆಯುರ್ವೇದ ಪದ್ಧತಿಯನ್ನು ಪ್ರಚಾರ ಪಡಿಸುವಲ್ಲಿ ನಾವೆಲ್ಲರೂ ವಿಫಲರಾಗಿದ್ದೇವೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ನಾಲ್ಕನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ..

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಧನ್ವಂತರಿ ಜಯಂತಿ ಹಾಗೂ 4ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ನಗರದ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಇಂದು ನಾಲ್ಕನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ. ಆಯುರ್ವೇದ ಅನಾದಿಕಾಲದಿಂದಲೂ ಇದೆ. ಇತ್ತೀಚಿನ ದಿನಗಳಲ್ಲಿ ವಿದೇಶಗಳಲ್ಲಿಯೂ ಆಯುರ್ವೇದಕ್ಕೆ ಹೆಚ್ಚು ಒತ್ತನ್ನು ನೀಡುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, ನಮ್ಮ ದೇಶದಲ್ಲಿ ಹುಟ್ಟಿದ ಆಯುರ್ವೇದ ಪದ್ಧತಿಯನ್ನು ಪ್ರಚಾರಪಡಿಸುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಆಯುರ್ವೇದದಿಂದ ಆಗುವ ಉಪಯೋಗವನ್ನು ಈಗಲಾದರೂ ಅರಿವು ಮೂಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ವೈದ್ಯರಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ಶಿಕ್ಷಣ ಪಡೆಯುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು ಆಯುರ್ವೇದದ ಬಗ್ಗೆ ಹೆಚ್ಚು ಕಲಿತುಕೊಳ್ಳಬೇಕು, ಕಲಿತುಕೊಂಡವರಿಗೆ ಮುಂದಿನ ದಿನಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ಸಲ್ಲಿಸಲು ಅವಕಾಶ ದೊರೆಯುತ್ತವೆ. ಹಾಗಾಗಿ ಆಯುರ್ವೇದದ ಚಿಕಿತ್ಸೆಯನ್ನು ಉಳಿಸಿ-ಬೆಳೆಸುವ ಕಾರ್ಯ ನಿಮ್ಮಿಂದಲೇ ಸಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ನಮ್ಮ ದೇಶದ ಕೊಡುಗೆಗಳನ್ನು ವಿಶ್ವಕ್ಕೆ ಪರಿಚಯಿಸುವ ಕಾರ್ಯ ಮಾಡಿದರು. ಯೋಗ ಮತ್ತು ಆಯುರ್ವೇದವನ್ನು ನಮ್ಮಲ್ಲಿ ಅನುಸರಿಸಲಿಲ್ಲವೆಂದರೆ ಯಾವ ಮಟ್ಟಕ್ಕೆ ನಮ್ಮ ಆರೋಗ್ಯ ಇರುತ್ತಿತ್ತು ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಹಲವು ವರ್ಷಗಳ ಹಿಂದೆ ಅಲೋಪತಿ ಔಷಧಿಗಳನ್ನು ಸಣ್ಣ ಪುಟ್ಟ ಕಾಯಿಲೆಗಳಿಗೆ ತೆಗೆದುಕೊಳ್ಳುತ್ತಿದ್ದೆ. ಅದರ ವ್ಯತಿರಿಕ್ತ ಪರಿಣಾಮ ಕೆಲ ವರ್ಷಗಳ ಹಿಂದೆ ನನಗೆ ಅರಿವಾಯಿತು. ಹೀಗಾಗಿ ಕಳೆದ ಎಂಟು ವರ್ಷಗಳಿಂದ ಆಯುರ್ವೇದ ಪದ್ಧತಿಗೆ ಬದಲಾಗಿದ್ದೇನೆ ಎಂದು ತಿಳಿಸಿದರು.

ABOUT THE AUTHOR

...view details