ತುಮಕೂರು: ಜಿಲ್ಲೆಯಲ್ಲಿ ಸೆಪ್ಟೆಂಬರ್ 30ರವರೆಗೆ ಮಾತ್ರ ಕೋವಿಡ್ ಬೂಸ್ಟರ್ ಡೋಸ್ನ್ನು ಉಚಿತವಾಗಿ ನೀಡಲಾಗುವುದು. ಈ ಕುರಿತಂತೆ ಸರ್ಕಾರ ಕೂಡ ಸೂಚನೆ ನೀಡಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ ವೀಣಾ ತಿಳಿಸಿದ್ದಾರೆ.
ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿನಿಂದ ಕೊರೊನಾ ಸೋಂಕಿತರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿಲ್ಲ. ಅಲ್ಲದೇ ನಿತ್ಯ ನಡೆಸಲಾಗುತ್ತಿರುವ ಆರ್ಟಿಪಿಸಿಆರ್ ಪರೀಕ್ಷೆಯನ್ನು, ಈಗ ಕೇವಲ ವಾರದಲ್ಲಿ ಎರಡು ದಿನ ಮಾತ್ರ ನಡೆಸಲಾಗುತ್ತಿದೆ. ಉಚಿತವಾಗಿ ನೀಡಲಾಗುತ್ತಿರುವ ಬೂಸ್ಟರ್ ಡೋಸನ್ನು ಪಡೆಯಲು ಕೂಡ ಬೆರಳೆಣಿಕೆಯಷ್ಟು ಜನ ಬರುತ್ತಿದ್ದಾರೆ ಎಂದರು.