ತುಮಕೂರು:ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಗೆ ಗುಬ್ಬಿ ಮತ್ತು ಶಿರಾ ತಾಲೂಕಿನ ಜನರು ಸರಿಯಾಗಿ ಸ್ಪಂದಿಸುತ್ತಿಲ್ಲ. ಹಾಗಾಗಿ ಎರಡೂ ತಾಲೂಕುಗಳನ್ನು ಸಂಪೂರ್ಣ ಲಾಕ್ಡೌನ್ ಮಾಡಬೇಕಿದೆ ಎಂದು ಸಂಸದ ಜಿ.ಎಸ್. ಬಸವರಾಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿ ಮತ್ತು ಶಿರಾ ತಾಲೂಕು ವ್ಯಾಪ್ತಿಯ ಕೆಲವೆಡೆ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದ್ರೂ ಕೂಡ ಗ್ರಾಮೀಣ ಪ್ರದೇಶಗಳ ಜನರು ಮಾತು ಕೇಳುತ್ತಿಲ್ಲ. ನಿಯಮ ಪಾಲಿಸುತ್ತಿಲ್ಲ. ಲಾಕ್ಡೌನ್ ಮಾಡಿದ್ರೆ ಅವರಿಗೆ ಬುದ್ಧಿ ಬರುತ್ತೆ. ಹಾಗಾಗಿ ಅವಶ್ಯಕ ಇರುವ ಹಳ್ಳಿಗಳಲ್ಲಿ ಲಾಕ್ಡೌನ್ ಮಾಡುವುದು ಸೂಕ್ತವೆಂದು ಸಲಹೆ ನೀಡಿದರು.