ಕರ್ನಾಟಕ

karnataka

ETV Bharat / state

ತುಮಕೂರು ಜಿಪಂ ಸಾಮಾನ್ಯ ಸ್ಥಾಯಿ ಸಮಿತಿ ಸಭೆ.. ಸಮಸ್ಯೆ ಪರಿಷ್ಕರಿಸಲು ಉಪ ಸಮಿತಿ ರಚನೆ.. - Kannada news

ಜಿಲ್ಲಾ ಪಂಚಾಯತ್​ನ ಸಾಮಾನ್ಯ ಸಭೆಯಲ್ಲಿ ಎಲ್ಲಾ ವಿಚಾರಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಹಾಗಾಗಿಯೇ ಉಪ ಸಮಿತಿಗಳನ್ನು ರಚಿಸಿಕೊಂಡು ಆ ಸಮಿತಿಯ ಮೂಲಕ ಪ್ರತಿ ವಿಷಯವನ್ನೂ ಗಣನೆಗೆ ತೆಗೆದುಕೊಂಡು ಚರ್ಚೆ ನಡೆಸಲಾಗುತ್ತದೆ.

ಸಾಮಾನ್ಯ ಸ್ಥಾಯಿ ಸಮಿತಿ ಸಭೆ

By

Published : Jun 28, 2019, 8:20 PM IST

ತುಮಕೂರು : ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಾಮಾನ್ಯ ಸ್ಥಾಯಿ ಸಮಿತಿ ಸಭೆ ನಡೆಯಿತು.

ಜಿಲ್ಲಾ ಪಂಚಾಯತ್​ನ ಸಾಮಾನ್ಯ ಸಭೆಯಲ್ಲಿ ಎಲ್ಲಾ ವಿಚಾರಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಹಾಗಾಗಿಯೇ ಉಪ ಸಮಿತಿಗಳನ್ನು ರಚಿಸಿಕೊಂಡು ಆ ಸಮಿತಿಯ ಮೂಲಕ ಪ್ರತಿ ವಿಷಯವನ್ನೂ ಗಣನೆಗೆ ತೆಗೆದುಕೊಂಡು ಚರ್ಚೆ ನಡೆಸಲಾಗುತ್ತದೆ.

ಸಾಮಾನ್ಯ ಸ್ಥಾಯಿ ಸಮಿತಿ ಸಭೆ

ಹಾಗಾಗಿ ಈ ಚರ್ಚೆಯನ್ನು ಎಲ್ಲರೂ ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಅಷ್ಟೇ ಅಲ್ಲದೆ, ಚರ್ಚೆಯಲ್ಲಿ ಪ್ರಸ್ತಾಪಿಸುವ ವಿಷಯದ ಪ್ರತಿಯನ್ನು ಒಂದೆರಡು ದಿನಗಳ ಮುಂಚೆಯೇ ಇ-ಮೇಲ್​ನಲ್ಲಿ ಕಳುಹಿಸಬೇಕು.

ಜೊತೆಗೆ ನೀವು ನೀಡುವಂತಹ ಮಾಹಿತಿಯನ್ನು ಪಿಪಿಟಿಯಲ್ಲೂ ಬರುವಂತೆ ನೋಡಿಕೊಳ್ಳಬೇಕು. ಆಗಮಾತ್ರ ಸಭೆಯಲ್ಲಿ ಚರ್ಚೆ ಆರೋಗ್ಯಕರವಾಗಿ ನಡೆಯುವುದು ಎಂದು ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಡಾ.ಎಸ್ ಪ್ರೇಮ್ ಕುಮಾರ್ ತಿಳಿಸಿದರು. ಇದೇ ವೇಳೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು.

ABOUT THE AUTHOR

...view details