ಕರ್ನಾಟಕ

karnataka

ETV Bharat / state

ಕರ್ನಾಟಕ ಬಂದ್​ಗೆ ತುಮಕೂರಲ್ಲಿ ಉತ್ತಮ ಪ್ರತಿಕ್ರಿಯೆ: ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಆಕ್ರೋಶ - etv bharat kannada

ತುಮಕೂರು ನಗರದಲ್ಲಿ ಕರ್ನಾಟಕ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವ್ಯಾಪಾರಸ್ಥರು ಬಂದ್​ಗೆ ಬೆಂಬಲ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ
ತುಮಕೂರಿನಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ

By ETV Bharat Karnataka Team

Published : Sep 29, 2023, 12:53 PM IST

Updated : Sep 29, 2023, 1:11 PM IST

ತುಮಕೂರಲ್ಲಿ ಪ್ರತಿಭಟನೆ

ತುಮಕೂರು:ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್​ಗೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ನಗರದಲ್ಲಿ ಆಟೋ ಸಂಚಾರ ಯಥಾ ಸ್ಥಿತಿಯಲ್ಲಿದೆ, ಆದರೂ ಆಟೋಗಳು ರಸ್ತೆಯಲ್ಲಿ ವಿರಳ ಸಂಖ್ಯೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್​ ಸಂಚಾರವಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಇನ್ನೊಂದೆಡೆ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನೀಡಿದರು.

ವಿಶೇಷವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣುಕು ಶವಯಾತ್ರೆಯನ್ನು ಮಾಡಿದರು. ರೈತ ಸಂಘ, ಕನ್ನಡ ಸೇನೆ, ಜೈ ಕರ್ನಾಟಕ, ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ಬಂದ್​ಗೆ ತುಮಕೂರು ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದವು. ಇನ್ನೊಂದೆಡೆ ಕೆಲ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತೇವೆ. ಚಲನಚಿತ್ರ ಮಂದಿರಗಳು ಕೂಡ ಮುಚ್ಚಲ್ಪಟ್ಟಿವೆ.

ಕಲಬುರಗಿಯಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ: ಕಾವೇರಿ ನೀರಿನ ವಿಚಾರವಾಗಿ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಕರ್ನಾಟಕ ಬಂದ್​ಗೆ ಕಲಬುರಗಿಯಲ್ಲಿ ಬೆಂಬಲ ಸಿಕ್ಕಿಲ್ಲ. ಎಂದಿನಂತೆ ಬೆಳಗ್ಗೆಯಿಂದಲೇ ಅಟೋ ಬಸ್ ವಾಹನಗಳು ರಸ್ತೆಗೆ ಇಳಿದಿದ್ದು, ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಅಂಗಡಿ ಮುಂಗಟ್ಟುಗಳು ನಿತ್ಯದಂತೆ ನಿಗದಿತ‌ ಸಮಯಕ್ಕೆ ತೆರೆದವು. ನಿನ್ನೆಯೇ ಸ್ಥಳೀಯ ಮಟ್ಟದ ಕೆಲ‌ ಸಂಘಟನೆ, ಸಂಘ ಸಂಸ್ಥೆಯವರು ಬಂದ್​ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದರು. ಅದರಂತೆ ಇಂದು ಬಂದ್​​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಂಜಾಗೃತ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಕೆಲ ರಾಜ್ಯಮಟ್ಟದ ಕನ್ನಡ‌ಪರ ಸಂಘಟನೆ ಕಾರ್ಯಕರ್ತರು ಬೆಳಗ್ಗೆ 11 ಗಂಟೆ ನಂತರ ಅರಬೆತ್ತಲೆ ಪ್ರತಿಭಟನೆ ನಡೆಸಿ ನಗರದಲ್ಲಿರುವ ತಮಿಳನಾಡು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸುವ ಮೂಲಕ ಆಗ್ರಹಿಸಲು ತಯಾರಿ ಮಾಡಿಕೊಂಡಿದ್ದಾರೆ. ಇದನ್ನು ಹೊರತುಪಡಿಸಿ ಬೆಳಗ್ಗೆ ಕೇಂದ್ರ ಬಸ್ ನಿಲ್ದಾಣ ಎದುರು ಪ್ರತಿಭಟಿಸಲು ಯತ್ನಿಸಿದ ರೈತಪರ ಸಂಘಟನೆ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಲ್ಬರ್ಗಾ ವಿವಿ ಪರೀಕ್ಷೆಗಳನ್ನು ಮುಂದೂಡಿದ್ದು ಹೊರತು ಪಡಿಸಿ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ:ಕರ್ನಾಟಕ ಬಂದ್​: ಹುಬ್ಬಳ್ಳಿ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ... ಶಾಲಾ ಕಾಲೇಜಿಗಿಲ್ಲ ರಜೆ, ಎಂದಿನಂತೆ ಆಟೋ ಬಸ್ ಸಂಚಾರ

Last Updated : Sep 29, 2023, 1:11 PM IST

ABOUT THE AUTHOR

...view details