ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ.. ತಾಪಂ ಕಾಂಪೌಂಡ್ ಆವರಣದಲ್ಲಿ ಸಭೆ ನಡೆಸಿದ ಶಾಸಕ ಗೌರಿಶಂಕರ್ - ಶಾಸಕ ಗೌರಿಶಂಕರ್ ಸಭೆ

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಶಾಸಕರು ಸುದೀರ್ಘ ಚರ್ಚೆ ನಡೆಸಿದರು..

Gourishankar
Gourishankar

By

Published : May 17, 2021, 5:23 PM IST

Updated : May 17, 2021, 5:38 PM IST

ತುಮಕೂರು :ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಾಲೂಕು ಪಂಚಾಯತ್​ ಕಚೇರಿ ಕಾಂಪೌಂಡ್​ ಆವರಣದಲ್ಲಿಯೇ ಶಾಸಕ ಗೌರಿಶಂಕರ್ ಸಭೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ತಾಲೂಕು ಪಂಚಾಯತ್​ ಕಚೇರಿ ಒಳಾಂಗಣ ಸಭಾಂಗಣದಲ್ಲಿ ಸಭೆ ನಡೆಸಿದ ಶಾಸಕ ಗೌರಿಶಂಕರ್ ಮುಂಜಾಗ್ರತಾ ಕ್ರಮವಾಗಿ ಕಚೇರಿ ಕಾಂಪೌಂಡ್ ಆವರಣದಲ್ಲಿ ಅಧಿಕಾರಿಗಳನ್ನು ಕೂರಿಸಿಕೊಂಡು ಮಾಹಿತಿ ಪಡೆದರು.

ಸೋಂಕಿನ ಭೀತಿಯಿಂದ ತಾ.ಪಂ. ಕಚೇರಿ ಆವರಣದಲ್ಲಿ ಶಾಸಕರ ಸಭೆ

ಕಚೇರಿಯ ಒಳಾಂಗಣ ಸಭಾಂಗಣದಲ್ಲಿ ಸಭೆ ನಡೆಸಿದರೆ, ಸಭೆಯಲ್ಲಿ ನೆರೆದಿದ್ದವರೆಲ್ಲರಿಗೂ ಸೋಂಕು ತಗುಲುವ ಸಾಧ್ಯತೆ ಇರುತ್ತೆ. ಅಲ್ಲದೆ ಬಹುತೇಕ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಕೂಡ ಇತ್ತೀಚಿಗಷ್ಟೇ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದಾರೆ. ಹೀಗಾಗಿ, ಈ ರೀತಿಯಾಗಿ ನಡೆಸಬೇಕಾದ ಅನಿವಾರ್ಯತೆ ಎದುರಾಯಿತು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಶಾಸಕರು ಸುದೀರ್ಘ ಚರ್ಚೆ ನಡೆಸಿದರು.

Last Updated : May 17, 2021, 5:38 PM IST

ABOUT THE AUTHOR

...view details