ತುಮಕೂರು:ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸರ್ಕಾರಿ ಬಸ್ ಸಂಪರ್ಕವೇ ಕಾಣದ ಕೊರಟಗೆರೆ ತಾಲೂಕಿನ ನವಿಲು ಕುರಿಕೆ ಗ್ರಾಮಕ್ಕೆ ಬಸ್ ಬಂದಿದ್ದು, ಗ್ರಾಮಸ್ಥರು ಸಂಭ್ರಮದಿಂದ ಬಸ್ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನ ಈ ಹಳ್ಳಿಯ ಜನರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿತ್ತು.
ಬಸ್ ಸಂಪರ್ಕ ಇಲ್ಲದೇ ನಿತ್ಯ ಪರದಾಡುತ್ತಿದ್ದ ಗ್ರಾಮಸ್ಥರು, ವಿದ್ಯಾರ್ಥಿಗಳು ಇತ್ತೀಚೆಗೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ ಬಸ್ಗಾಗಿ ಮನವಿ ಸಲ್ಲಿಸಿದ್ದರು. ಈ ವೇಳೆ ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸುವಂತೆ ಅಂದಿನ ತಹಶೀಲ್ದಾರ್ ನಹಿದ ಜಂ. ಜಂ. ಅವರಿಗೆ ಗೃಹ ಸಚಿವರು ನಿರ್ದೇಶನ ನೀಡಿದ್ದರು. ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳು ಇದೀಗ ಫುಲ್ ಖುಷ್ ಆಗಿದ್ದಾರೆ.