ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಪಂಚಾಯತ್‌ ನೌಕರರ ಪ್ರತಿಭಟನೆ - tumkur news

ಸರ್ಕಾರದಿಂದ ನೌಕರರಿಗೆ ಮಂಜೂರಾಗಿರುವ ಹಣವನ್ನು ಪಂಚಾಯತ್‌ ಇಒ ಹಾಗೂ ಸಿ ಎಸ್ ಅಧಿಕಾರಿಗಳು ಪಿಎಫ್ಎಂಎಸ್ ಮೂಲಕ ಅಪ್ಲೋಡ್ ಮಾಡಬೇಕಾಗುತ್ತದೆ. ಈ ಕಾರ್ಯವನ್ನು ಮಾಡುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ..

Gram Panchayat employees protest
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

By

Published : Sep 22, 2020, 4:33 PM IST

ತುಮಕೂರು : ಗ್ರಾಮ ಪಂಚಾಯತ್‌ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್‌ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.

ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್​​ಗಳಿಗೆ, ಗುಮಾಸ್ತರಿಗೆ ವೇತನ ಜಾರಿ ಮಾಡಬೇಕು. ಬಾಕಿ ವೇತನ ತೆರಿಗೆ ಸಂಗ್ರಹದಲ್ಲಿ 14ನೇ ಹಾಗೂ 15ನೇ ಹಣಕಾಸು ಆಯೋಗದ ಹಣದಲ್ಲಿ ಬಾಕಿ ಉಳಿದ ಸಿಬ್ಬಂದಿ ವೇತನ ಪಾವತಿಸಬೇಕು.

ನಿವೃತ್ತಿಯಾದವರಿಗೆ 15 ತಿಂಗಳು ಗ್ರಾಜ್ಯುಟಿ ನೀಡಬೇಕು. ಸರ್ಕಾರದ ಆದೇಶದಂತೆ ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು. ಹೊಸದಾಗಿ ಕಾನೂನುಬಾಹಿರವಾಗಿ ಅಕ್ರಮ ನೇಮಕಾತಿ ಮಾಡಿಕೊಳ್ಳುವುದನ್ನು ತಡೆಯಬೇಕು. ಈಗಾಗಲೇ ನೇಮಕಾತಿ ಮಾಡಿಕೊಂಡವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ನೇಮಕಾತಿ ರದ್ದು ಮಾಡಬೇಕು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ

ಬಿಲ್ ಕಲೆಕ್ಟರ್​​ರಿಂದ ಗ್ರೇಡ್-2 ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕ ಹುದ್ದೆಗಳಿಗೆ ಬಡ್ತಿ ನೀಡಬೇಕು. ಸರ್ಕಾರಿ ಆದೇಶಗಳನ್ನು ಜಾರಿ ಮಾಡದ ಪಿಡಿಒಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸಲಾಯಿತು.

ಈ ವೇಳೆ ಮಾತನಾಡಿದ ಕೆ ಎನ್ ಸುಬ್ರಮಣ್ಯ, ಗ್ರಾಮ ಪಂಚಾಯತ್‌ ನೌಕರರಿಗೆ 10 ರಿಂದ 12 ತಿಂಗಳವರೆಗಿನ ವೇತನ ಈವರೆಗೂ ಬಿಡುಗಡೆಯಾಗಿಲ್ಲ. ಬಿಲ್ ಕಲೆಕ್ಟರ್‌ರಿಂದ ಗ್ರೇಡ್-2 ಕಾರ್ಯದರ್ಶಿಗೆ ಬಡ್ತಿ ನೀಡಬೇಕು. 20ವರ್ಷಗಳ ಕಾಲ ಗ್ರಾಮ ಪಂಚಾಯತ್‌ನಲ್ಲಿ ನೌಕರರಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತಿಯಾದವರಿಗೆ ಕಾನೂನಿನ ಪ್ರಕಾರ ಉಪಧನ ನೀಡಬೇಕು.

ಸರ್ಕಾರದಿಂದ ನೌಕರರಿಗೆ ಮಂಜೂರಾಗಿರುವ ಹಣವನ್ನು ಪಂಚಾಯತ್‌ ಇಒ ಹಾಗೂ ಸಿ ಎಸ್ ಅಧಿಕಾರಿಗಳು ಪಿಎಫ್ಎಂಎಸ್ ಮೂಲಕ ಅಪ್ಲೋಡ್ ಮಾಡಬೇಕಾಗುತ್ತದೆ. ಈ ಕಾರ್ಯವನ್ನು ಮಾಡುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.

ಹಾಗಾಗಿ, ನೌಕರರಿಗೆ ಸಂಬಳ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ ಎನ್ ಸುಬ್ರಮಣ್ಯ ಅಸಮಾಧಾನ ವ್ಯಕ್ತಪಡಿಸಿದರು.

ABOUT THE AUTHOR

...view details