ಕರ್ನಾಟಕ

karnataka

ETV Bharat / state

ತಿಗಳ ಸಮುದಾಯಕ್ಕೆ ಟಿಕೆಟ್‌ ಕೊಡಲು ನಾನು ಸಿದ್ಧ: ಹೆಚ್ ​ಡಿ ಕುಮಾರಸ್ವಾಮಿ - commission in Coalition Government

ನಾವು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ವಿ. ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

By

Published : Aug 26, 2022, 6:12 PM IST

ತುಮಕೂರು: ಮುಂದಿನ ಚುನಾವಣೆಯಲ್ಲಿ ತಿಗಳ ಸಮುದಾಯಕ್ಕೆ ಒಂದೆರಡು ಟಿಕೆಟ್‌ ಕೊಡಲು ನಾನು ಸಿದ್ಧ. ಸಣ್ಣ ಸಣ್ಣ ಸಮುದಾಯಕ್ಕೂ ಅವಕಾಶ ಕೊಡಬೇಕೆಂಬುದು ನಮ್ಮ ಆಸೆ ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 40 ಪರ್ಸೆಂಟ್‌ ವಿಚಾರ ಸ್ವಾತಂತ್ರ ಬಂದ ನಂತರ ಹಾಗೂ ಸ್ವಾತಂತ್ರ ಪೂರ್ವದಲ್ಲೂ ಇದು ಇದೆ. ಸ್ವತಂತ್ರ ಪೂರ್ವದಲ್ಲಿ ಉಡುಗೊರೆ ಕೊಡೋದನ್ನು ಇಟ್ಟುಕೊಂಡಿದ್ದರು. ಸ್ವಾತಂತ್ರ್ಯಾ ಬಳಿಕ ಸಣ್ಣಪುಟ್ಟ ಮಟ್ಟದಲ್ಲಿ ಸರ್ಕಾರದ ವ್ಯವಹಾರ ನಡೆಯುತ್ತಿತ್ತು. 2008ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸ್ವೇಚ್ಛಾಚಾರದಂತೆ ನಡೆಯುತ್ತಿದೆ. ಇಂದು ಜನಸಾಮಾನ್ಯರಲ್ಲೂ ಚರ್ಚೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಮಾತನಾಡಿದರು

ಒಬ್ಬರೋ ಇಬ್ಬರೋ ಬಿಟ್ಟರೆ ಈ ಸರ್ಕಾರದಲ್ಲಿ ಬೇರೆ ಸಚಿವರ ಬಗ್ಗೆ ಚರ್ಚೆ ಮಾಡುವುದರಲ್ಲಿ ಪ್ರಯೋಜನವಿಲ್ಲ. ಮೈತ್ರಿ ಸರ್ಕಾರದಲ್ಲಿ ಕೆಲ ಇಲಾಖೆಯಲ್ಲಿ ಕಮಿಷನ್‌ ನಡೆದಿದೆ. ಜೆಡಿಎಸ್‌ ಮಂತ್ರಿಗಳಿಗೆ ಕಮಿಷನ್‌ ಇಟ್ಟುಕೊಳ್ಳಿ ಅಂತ ನಾನು ಸೂಚನೆ ಕೊಟ್ಟಿರಲಿಲ್ಲ. ಯಾರಿಗೂ ಆ ಕೆಲಸ ಮಾಡಲು ಬಿಟ್ಟಿಲ್ಲ ಎಂದರು. ಇದೇ ವೇಳೆ, ಜಿ ಟಿ ದೇವೇಗೌಡರು ಪಾರ್ಟಿ ಬಿಟ್ಟು ಹೋಗಿಲ್ಲ, ಜನತಾ ಪಕ್ಷದಲ್ಲಿ ಇದ್ದಾರೆ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ನೇಮಕಾತಿ ಪರೀಕ್ಷೆಗಳ ಅಕ್ರಮ ಸರ್ಕಾರದ ಯೋಗ್ಯತೆಗೆ ಹಿಡಿದ ಕನ್ನಡಿ: ಸಿದ್ದರಾಮಯ್ಯ

ABOUT THE AUTHOR

...view details