ತುಮಕೂರು: ನಿನ್ನೆ ರಾತ್ರಿ ಜಿಲ್ಲೆಯ ಬಹುತೇಕ ಕಡೆ ಮಳೆಯಾಗಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕನಾಯಕನಹಳ್ಳಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ - ತುಮಕೂರು ಮಳೆ ಸುದ್ದಿ
ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮನೆಗಳಿಗೆ ನುಗ್ಗಿದ ಮಳೆ ನೀರು
ನಿನ್ನೆ ಸಂಜೆಯಿಂದ ಆರಂಭವಾದ ಮಳೆ ರಾತ್ರಿ ತನಕ ಸುರಿದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಕನಹಳ್ಳಿ, ಗೊಲ್ಲರಟ್ಟಿಯಲ್ಲಿರುವ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ಕೆಲ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಮಳೆಯಿಂದ ಕಂಗಾಲಾದ ನಿವಾಸಿಗಳು ಮನೆಯೊಳಗಿಂದ ನೀರನ್ನು ಹೊರಹಾಕಲು ಹರಸಾಹಸ ಪಡಬೇಕಾಯಿತು.