ತುಮಕೂರು :ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ನಾಲೆಗಳ ಮೂಲಕ ಹರಿದು ಬರುತ್ತಿರುವ ಹಿನ್ನೆಲೆ ಜಿಲ್ಲೆಯ ನಾಲಾ ವ್ಯಾಪ್ತಿಯಲ್ಲಿ ಬರುವ ಕೋಡಿ ಬಿದ್ದ ಕೆರೆಗಳು ತುಂಬಿ ಹರಿಯುತ್ತಿವೆ. ಇದು ರೈತರ ಸಂತಸಕ್ಕೆ ಕಾರಣವಾಗಿದೆ.
ಕೋಡಿ ಬಿದ್ದಿದ್ದ ಕೆರೆಗಳನ್ನು ತುಂಬಿದ ಹೇಮಾವತಿ : ತುಮಕೂರು ರೈತರಲ್ಲಿ ಮನೆ ಮಾಡಿದ ಸಂತಸ - tumkur rain news
ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ತುಮಕೂರು ತಾಲೂಕಿನ ಬಹುತೇಕ ಕೆರೆಗಳಿಗೆ ಹೇಮಾವತಿ ನೀರು ಬಿಡುಗಡೆ ಹಿನ್ನೆಲೆ ಈ ರೀತಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೊಂದೆಡೆ ಕಳೆದೆರಡು ದಿನಗಳಿಂದ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆ ಕೆರೆಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದೆ..
ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ತುಮಕೂರು ತಾಲೂಕಿನ ಬಹುತೇಕ ಕೆರೆಗಳಿಗೆ ಹೇಮಾವತಿ ನೀರು ಬಿಡುಗಡೆ ಹಿನ್ನೆಲೆ ಈ ರೀತಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೊಂದೆಡೆ ಕಳೆದೆರಡು ದಿನಗಳಿಂದ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆ ಕೆರೆಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದೆ.
ಮಳೆ ಹಾಗೂ ನದಿ ನೀರು ಸೇರಿ ಕೋಡಿ ಹರಿಯುತ್ತಿರುವ ಕೆರೆ-ಕಟ್ಟೆಗಳನ್ನು ನೋಡಿ ರೈತರ ಮುಖದಲ್ಲಿ ಸಂತಸ ಮೂಡಿದೆ. ತುಂಬಿ ಹರಿಯುತ್ತಿರುವ ಮಲ್ಲಘಟ್ಟ, ಚೆಂಗಾವಿ, ಇಡಗೂರು, ಮಾವಿನಹಳ್ಳಿ ಕೆರೆಗಳು ತುಂಬಿ ಹರಿಯುತ್ತಿವೆ. ಹತ್ತಾರು ವರ್ಷಗಳಿಂದ ನೀರಿಲ್ಲದೆ ಬರಡಾಗಿದ್ದ ಕೆರೆಗಳಲ್ಲಿ ಇದೀಗ ನೀರು ಬಂದಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಾಣವಾಗಿದೆ.