ತುಮಕೂರು: ಬೆಂಗಳೂರಿನಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ಸರ್ಕಾರದ ಸೂಚನೆ ಮೇರೆಗೆ ತುಮಕೂರು ಜಿಲ್ಲೆಯಲ್ಲಿಯೂ ಕೂಡ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಆದೇಶಿಸಿದ್ದಾರೆ.
ತುಮಕೂರು ನಗರದಲ್ಲಿಯೂ ಹೈಅಲರ್ಟ್.. ಎಸ್ಪಿ ವಂಶಿಕೃಷ್ಣ ಆದೇಶ - HighAlert also in Tumkur
ತುಮಕೂರು ಜಿಲ್ಲೆಯಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ನಗರಕ್ಕೆ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಈವರೆಗೂ ಯಾವುದೇ ಶಂಕಿತರು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.
ನಗರದ ಬಸ್ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ರೈಲ್ವೆ ನಿಲ್ದಾಣ, ಕಾಲೇಜು ಮೈದಾನ, ಕ್ರೀಡಾಂಗಣ ಸುತ್ತಮುತ್ತ ನಿರಂತರವಾಗಿ ಪೊಲೀಸರು ಗಸ್ತು ಮಾಡುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. 10 ಮಂದಿ ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಕ್ವಿಕ್ ರೆಸ್ಪಾನ್ಸ್ ಟೀಂ ನಿರಂತರವಾಗಿ ನಗರದಲ್ಲಿ ತಪಾಸಣೆ ನಡೆಸುತ್ತಿದೆ. ಅಗಸ್ಟ್ 16ರ ಸಂಜೆಯಿಂದ ಎಂಜಿ ರಸ್ತೆ ಶಾಪಿಂಗ್ ಕಾಂಪ್ಲೆಕ್ಸ್ಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ಕ್ಯಾತ್ಸಂದ್ರ, ಕರಜೀವನಹಳ್ಳಿ, ಶಿರಾಗೇಟ್ ಬಳಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ. ಎಲ್ಲಾ ವಾಹನಗಳ ತಪಾಸಣೆ ನಡೆಸಿ ಬಿಡಲಾಗುತ್ತಿದೆ ಎಂದರು.
ಎಲ್ಲಾ ಪೊಲೀಸ್ ಠಾಣೆಗಳಿಗೂ ಕೂಡ ಅಲರ್ಟ್ ಆಗಿರಲು ಮಾಹಿತಿ ನೀಡಲಾಗಿದೆ. ಲಾಡ್ಜ್‌ಗಳ ತಪಾಸಣೆಯನ್ನೂ ನಡೆಸಿದ್ದೇವೆ. ಈವರೆಗೂ ಯಾವುದೇ ರೀತಿಯ ಶಂಕಿತರು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.