ತುಮಕೂರು:ಮಧುಮೇಹದಿಂದ ಬಳಲುತ್ತಿದ್ದ ಕರ್ತವ್ಯ ನಿರತ ಹೋಂ ಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದು, ತುಮಕೂರು ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದೆ. ಅಲ್ಲದೇ ಮೃತ ವ್ಯಕ್ತಿಯ ಗಂಟಲು ದ್ರವದ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಕರ್ತವ್ಯ ನಿರತ ಹೋಂ ಗಾರ್ಡ್ ಸಾವು...ಸ್ಯಾಂಪಲ್ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ - Tumkur news
ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಹೋಂ ಗಾರ್ಡ್ ಸಿಬ್ಬಂದಿ ಮಧುಮೇಹದಿಂದ ಮೃತಪಟ್ಟಿದ್ದಾರೆ.
ಹನುಮಂತು ಎಂಬುವರೇ ಮೃತಪಟ್ಟ ಹೋಂ ಗಾರ್ಡ್. ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಕೊರೊನಾ ವಾರಿಯರ್ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನಲೆಯಲ್ಲಿ ಶ್ರೀದೇವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನ ಗಂಟಲು ದ್ರವವನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಪರೀಕ್ಷೆಯ ವರದಿ ಬರುವವರೆಗೆ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡದಿರಲು ನಿರ್ಧರಿಸಲಾಗಿದೆ. ಅಲ್ಲದೆ ಮೃತ ವ್ಯಕ್ತಿಯು ತೀವ್ರ ಮಧುಮೇಹದಿಂದ ಬಳಲುತ್ತಿದ್ದರು ಎಂದು 'ಈಟಿವಿ ಭಾರತ್'ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.