ತುಮಕೂರು:ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕು ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ಭಕ್ತರ ಮೇಲೆ ಹೆಜ್ಜೇನು ದಾಳಿ... 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು - kannada news
ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ 30ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.
ಭಕ್ತರ ಮೇಲೆ ಹೆಜ್ಜೇನು ದಾಳಿ
ವೆಂಕಟಾಪುರ ಗ್ರಾಮದಲ್ಲಿರುವ ಓಬಳ ನರಸಿಂಹಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ಬಕ್ತರ ಮೇಲೆ ದೇವಸ್ಥಾನದ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿವೆ. 30ಕ್ಕೂ ಹೆಚ್ಚು ಭಕ್ತರಿಗೆ ಗಾಯಗಳಾಗಿದ್ದು, ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.