ಕರ್ನಾಟಕ

karnataka

ETV Bharat / state

ಹಾಸ್ಟೆಲ್ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: ​ವಾರ್ಡನ್​ ಸೇರಿ ಇಬ್ಬರು ಅಮಾನತು

ಅಪ್ರಾಪ್ತ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಹಾಸ್ಟೆಲ್​ ವಾರ್ಡನ್​ ಸೇರಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ.

hostel-warden-suspended-in-minor-girl-student-delivers-baby-case
​ವಾರ್ಡನ್​ ಸೇರಿ ಇಬ್ಬರು ಅಮಾನತು

By ETV Bharat Karnataka Team

Published : Jan 11, 2024, 5:46 PM IST

ತುಮಕೂರು:ಹಾಸ್ಟೆಲ್​ನಲ್ಲಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಸಂಬಂಧ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ ಒನ್ ಸಹಾಯಕ ನಿರ್ದೇಶಕ ಶಿವಣ್ಣ ಹಾಗೂ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಬಾಲಕಿಯು ತುಮಕೂರು ಜಿಲ್ಲೆಯ ಹಾಸ್ಟೆಲ್​ವೊಂದರಲ್ಲಿ ಇದ್ದುಕೊಂಡು 9ನೇ ತರಗತಿ ಓದುತ್ತಿದ್ದಳು. ವಿದ್ಯಾರ್ಥಿನಿಯು ಕಳೆದ ನಾಲ್ಕೈದು ದಿನಗಳಿಂದ ಶಾಲೆಗೆ ಗೈರು ಹಾಜರಾಗಿದ್ದಳು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿತ್ತು. ಬಳಿಕ ವಿದ್ಯಾರ್ಥಿನಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಹೊಟ್ಟೆನೋವು ಎಂದು ಹೇಳಿ ಬಾಲಕಿ ಆಸ್ಪತ್ರೆಗೆ ಬಂದಿದ್ದಳು. ಆಗ ಬಾಲಕಿಗೆ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಕೆಲ ಹೊತ್ತಲ್ಲೇ ಹೆರಿಗೆ ನೋವು ಕಂಡುಬಂದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಹೆಚ್ಚಿನ ಆರೈಕೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಕ್ರಮ ಕೈಗೊಂಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಬಾಲಕಿಯ ದೇಹವು ಯಾವುದೇ ಅನುಮಾನ ಮೂಡಿಸುವಂತಿರಲಿಲ್ಲ. ಅವಳು ಬೇರೆಯವರ ಜೊತೆ ಸಂಪರ್ಕದಲ್ಲಿರುವುದು ಕೂಡ ಗಮನಕ್ಕೆ ಬಂದಿರಲಿಲ್ಲ ಎಂದು ವಾರ್ಡನ್ ನಿವೇದಿತಾ ಅವರು ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಗೇಪಲ್ಲಿ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಗುವಿಗೆ ಜನ್ಮ ನೀಡಿದ 14ರ ಬಾಲಕಿ

ABOUT THE AUTHOR

...view details