ತುಮಕೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಜ್ಯೋತಿಪುರ ನಗರದ ರಘು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತನಿಂದ 14 ಲಕ್ಷ ರೂ. ಬೆಲೆಬಾಳುವ 350 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ತುಮಕೂರಿನಲ್ಲಿ ಮನೆಗಳ್ಳನ ಬಂಧನ: 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ - ತುಮಕೂರು ಅಪರಾಧ ಸುದ್ದಿ
ಮನೆಗಳ್ಳತನ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತನಿಂದ 14 ಲಕ್ಷ ರೂ. ಬೆಲೆಬಾಳುವ 350 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮನೆಗಳ್ಳನ ಬಂಧನ
ದೊಡ್ಡಬಳ್ಳಾಪುರ ತಾಲೂಕು ಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ರಘು, ಕೋರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದನು. ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು.
ಇನ್ನು ತನಿಖೆ ವೇಳೆ ಕೊಳಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಇರಕಸಂದ್ರ ಕಾಲೋನಿ ಸಿದ್ದಾಪುರದ ಚಾಮುಂಡಿ ಗುಡ್ಡದ ಬಳಿ ರಘು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.