ತುಮಕೂರು:ಕೊಬ್ಬರಿ ನಾಡು ತುಮಕೂರಲ್ಲಿ ಚುನಾವಣಾ ಆರ್ಭಟ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು ಜನರು ಕೇಕೆ ಹಾಕಿ ಸಂತಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಇಂದು ಶಿರಾ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ಮತಬೇಟೆ ನಡೆಸಿದರು. ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಪರ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜನರು ಕುರಿ ಗಿಫ್ಟ್ ನೀಡಿ ಅಭಿನಂದಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಟಿ.ಬಿ.ಜಯಚಂದ್ರ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ರು. ಶಿರಾ ಚುನಾವಣಾ ಪ್ರಚಾರದ ಬಳಿಕ ಹೆಲಿಕಾಪ್ಟರ್‌ನಲ್ಲಿ ಚಿಕ್ಕನಾಯಕನಹಳ್ಳಿ ಆಗಮಿಸಿದ ಅವರು, ಚಿಕ್ಕನಾಯಕನಹಳ್ಳಿಯ ಹೈಸ್ಕೂಲ್ ಮೈದಾನದಲ್ಲಿ ಕಿರಣ್ ಕುಮಾರ್ ಪರ ಮತಯಾಚನೆ ನಡೆಸಿದರು.