ತುಮಕೂರು: ದೆಹಲಿಯಲ್ಲಿ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹಾಗೂ ಅವರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ತುಮಕೂರಿನಲ್ಲಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ತುಮಕೂರಿನಲ್ಲಿ ಉಪವಾಸ ಸತ್ಯಾಗ್ರಹ ಗಾಂಧೀಜಿ ಹುತಾತ್ಮ ದಿನದ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಸದಸ್ಯರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯ ಬಳಿ ಬಾಡಿಗೆ ಗೂಂಡಾಗಳನ್ನು ಕಳುಹಿಸಿ ಬಿಜೆಪಿ ದಾಂಧಲೆ ನಡೆಸಿದೆ. ಅಲ್ಲದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪ್ರಕರಣಗಳನ್ನು ದಾಖಲಿಸಿದೆ ಎಂದು ಪ್ರತಿಟನಾಕಾರರು ಆರೋಪಿಸಿದರು.
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಅಲ್ಲದೇ ರೈತರ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.