ತುಮಕೂರು : ನನಗೆ ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗುವ ಪ್ರಯತ್ನ ಮಾಡುತ್ತೇನೆ. ಆರೋಗ್ಯ ನೋಡಿಕೊಳ್ಳಬೇಕಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ನಡುವೆ ನಿಜವಾಗಿಯೂ ಹೋಗುವ ಪ್ರಯತ್ನ ಮಾಡುತ್ತೇನೆ. ಶ್ರೀ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಹೇಳಿಕೆಯನ್ನು ಕೊಡುವುದಿಲ್ಲ ಎಂದರು.
ಶ್ರೀ ಬಾಲ ಮಂಜುನಾಥ ಶ್ರೀಗಳು ಶ್ರೀ ಕ್ಷೇತ್ರಕ್ಕೆ ಬರಲು ಆಹ್ವಾನ ನೀಡಿದ್ದರು. ವಿದ್ಯಾ ಚೌಡೇಶ್ವರಿಯ ಉತ್ತರಾಯಣ ಪುಣ್ಯಕಾಲ. ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ವರ್ಧಂತಿ ಉತ್ಸವ ಮತ್ತು ಅಮ್ಮನವರ ಜಾತ್ರೆಯು ಶಾಸ್ತ್ರೋಕ್ತವಾಗಿ ನಡೆದಿದೆ. ನಾನು ಉಪವಾಸ ವ್ರತ ಕೈಗೊಂಡು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು.