ತುಮಕೂರು:ಬೆಂಗಳೂರಿಗೆ ತೆರಳಿ ನೂತನ ಸಚಿವರ ಖಾತೆ ಹಂಚಿಕೆಯ ಪಟ್ಟಿ ಮಾಡಿ ರಾಜ್ಯಪಾಲರಿಗೆ ಕಳುಹಿಸಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜ್ಯಪಾಲರಿಗೆ ಕಳುಹಿಸಲಿದ್ದೇನೆ: ತುಮಕೂರಲ್ಲಿ CM ಹೇಳಿಕೆ - ತುಮಕೂರಿನ ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಭೇಟಿ
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜ್ಯಪಾಲರಿಗೆ ಕಳುಹಿಸಲಿದ್ದೇನೆ: ತುಮಕೂರಲ್ಲಿ CM ಹೇಳಿಕೆ
ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ಮುಖ್ಯಮಂತ್ರಿಗಳು, ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಶ್ರೀಮಠಕ್ಕೆ ಬಂದು ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೇ ಮಠದ ದಾನ ಧರ್ಮದ ಸಂಸ್ಕೃತಿಯ ಪ್ರೇರಣೆ ಪಡೆದಿದ್ದೇನೆ ಎಂದು ಹೇಳಿದರು.
Last Updated : Aug 7, 2021, 5:45 AM IST