ತುಮಕೂರು:ಹಾಸನ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ದೇವೇಗೌಡರ ಸಲಹೆ ಪಡೆದು ಹಾಸನ ಅಭಿವೃದ್ಧಿ ಮಾಡುವೆ: ಸಚಿವ ಗೋಪಾಲಯ್ಯ
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನೇಕ ಬಾರಿ ಸಚಿವರಾಗಿ ಕೆಲಸ ಮಾಡಿದವರಾಗಿದ್ದಾರೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಲಹೆದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ದೇವೇಗೌಡರ ಸಲಹೆ ಪಡೆದು ಹಾಸನ ಅಭಿವೃದ್ಧಿ ಮಾಡುವೆ: ಸಚಿವ ಗೋಪಾಲಯ್ಯ
ತುಮಕೂರಿನಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಅನೇಕ ಬಾರಿ ಸಚಿವರಾಗಿ ಕೆಲಸ ಮಾಡಿದವರಾಗಿದ್ದಾರೆ, ಅವರೊಂದಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಲಾಕ್ಡೌನ್ ಸಂದರ್ಭದಲ್ಲಿ 4 ಲಕ್ಷ ವಲಸೆ ಕಾರ್ಮಿಕ ಕುಟುಂಬಗಳಿಗೆ ಪಡಿತರವನ್ನು ನೀಡಲಾಗಿದೆ. ಜೂನ್ ತಿಂಗಳ ಅಂತ್ಯದವರೆಗೂ ವಲಸೆ ಕಾರ್ಮಿಕ ಕುಟುಂಬಗಳಿಗೆ ಪಡಿತರ ನೀಡಲಾಗುವುದು ಎಂದರು.