ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಅಗತ್ಯವಿರುವ ಅಭಿವೃದ್ಧಿಗೆ ಸಂಬಂಧಪಟ್ಟ ಅಪೇಕ್ಷೆಗಳನ್ನು ಪೂರೈಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನೊಣವಿನಕೆರೆ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುವೆ: ಸಿಎಂ ಭರವಸೆ - ಸಿಎಂ ಯಡಿಯೂರಪ್ಪ ಲೆಟೆಸ್ಟ್ ನ್ಯೂಸ್
ತಿಪಟೂರು ತಾಲೂಕಿನ ನೊಣವಿನಕೆರೆಯ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಅಗತ್ಯವಿರುವ ಅಭಿವೃದ್ಧಿಗೆ ಸಂಬಂಧಪಟ್ಟ ಅಪೇಕ್ಷೆಗಳನ್ನು ಪೂರೈಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನೊಣವಿನಕೆರೆ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುವೆ....ಸಿಎಂ ಭರವಸೆ!
ಮಠದಲ್ಲಿ ನಡೆದ ಶ್ರೀ ಕರಿಬಸವ ದೇಶೀಕೇಂದ್ರ ಮಹಾಸ್ವಾಮಿಗಳ 12ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ವರ್ಗದ ಜನರ ಶಾಂತಿ ನೆಮ್ಮದಿಯ ಅಭಿವೃದ್ಧಿ ಕಾರ್ಯದಲ್ಲಿ ನಾನು ತೊಡಗಿದ್ದೇನೆ. ಸ್ವಾಮೀಜಿಯವರ ಆಶೀರ್ವಾದ ಪಡೆದು ತೆರಳುತ್ತಿದ್ದೇನೆ ಎಂದರು. ಇದೇ ವೇಳೆ ನಡೆದ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣ, ಶಾಸಕರಾದ ಬಿ.ಸಿ.ನಾಗೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.