ತುಮಕೂರು : ನಗರದ ಹೊರವಲಯದ ಕ್ಯಾತ್ಸಂದ್ರ ಟೋಲ್ ಬಳಿ ಅನುಮತಿಯಿಲ್ಲದೆ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್'ಗಳನ್ನು ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅನುಮತಿಯಿಲ್ಲದೆ ಸಂಚರಿಸುತ್ತಿದ್ದ ರಾಜಸ್ಥಾನ ಖಾಸಗಿ ಬಸ್ಗಳ ವಶ: ಪ್ರಕರಣ ದಾಖಲು - ಹೊರ ರಾಜ್ಯದ ಬಸ್ಗಳು ವಶ
ಯಾವುದೇ ಪೂರ್ವಾನುಮತಿಯಿಲ್ಲದೆ ಹೊರ ರಾಜ್ಯಕ್ಕೆ ಸೇರಿದ ಎರಡು ಬಸ್ಸುಗಳು ಪ್ರಯಾಣಿಕರನ್ನು ತುಂಬಿಕೊಂಡು ರಾಜಸ್ಥಾನಕ್ಕೆ ತೆರಳುತ್ತಿದ್ದವು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಕ್ಯಾತ್ಸಂದ್ರ ಟೋಲ್ ಬಳಿ ಬಸ್'ಗಳನ್ನು ಅಡ್ಡಗಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊರ ರಾಜ್ಯದ ಬಸ್ಗಳು ವಶ
ರಾಜ್ಯಾದ್ಯಂತ ಕೋವಿಡ್ ನಿಯಮಗಳು ಜಾರಿಯಲ್ಲಿದ್ದು, ಖಾಸಗಿ ಬಸ್ ಸಂಚಾರ ಸ್ಥಗಿತವಿದೆ.
ಹೊರ ರಾಜ್ಯದ ಬಸ್ಗಳು ವಶ
ಈ ನಡುವೆ ಸರ್ಕಾರ ಅಥವಾ ಸಾರಿಗೆ ಇಲಾಖೆಯಿಂದ ಪೂರ್ವಾನುಮತಿಯಿಲ್ಲದೆ ಹೊರ ರಾಜ್ಯಕ್ಕೆ ಸೇರಿದ ಎರಡು ಬಸ್ಸುಗಳು ಪ್ರಯಾಣಿಕರನ್ನು ತುಂಬಿಕೊಂಡು ರಾಜಸ್ಥಾನಕ್ಕೆ ತೆರಳುತ್ತಿದ್ದವು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಕ್ಯಾತ್ಸಂದ್ರ ಟೋಲ್ ಬಳಿ ಬಸ್'ಗಳನ್ನು ಅಡ್ಡಗಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.