ತುಮಕೂರು:ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೂವರೆ ವರ್ಷಗಳ ನಂತರ ರಾಜಕೀಯ ಗೊಂದಲ ಸೃಷ್ಟಿಯಾಗುತ್ತಲೇ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಸ್ಎಂ ಕೃಷ್ಣ ಹಾಗು ಸಿದ್ದರಾಮಯ್ಯ ಅವರು ಮಾತ್ರ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಇನ್ನುಳಿದಂತೆ ಯಾರೇ ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಹಾಗೂ ನಿರ್ಗಮಿಸುವ ವೇಳೆ ರಾಜಕೀಯ ಗೊಂದಲಗಳು ಸರ್ವೇಸಾಮಾನ್ಯವಾಗಿದ್ದವು ಎಂದು ತಿಳಿಸಿದರು.