ತುಮಕೂರು:ರಾಜ್ಯದಲ್ಲಿ ಇದುವರೆಗೂ ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡಿರುವ 10,101 ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ..! - ಸಚಿವ ಎಸ್.ಟಿ.ಸೋಮಶೇಖರ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿರುವಂತೆ ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿರುವಂತೆ ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಹಕಾರ ಇಲಾಖೆಯಿಂದ ಆಯಾ ಜಿಲ್ಲೆಗಳಲ್ಲಿ ಪ್ರೋತ್ಸಾಹ ಧನ ವಿತರಣೆ ಪ್ರಕ್ರಿಯೆ ನಡೆಯಲಿದೆ ಎಂದರು.