ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಇದ್ದು, ಜಿಲ್ಲಾಡಳಿತ ಹೆಚ್ಚು ಹೆಚ್ಚು ವ್ಯಾಕ್ಸಿನ್ ನೀಡುವ ಗುರಿ ಹೊಂದಿದೆ. ಈಗಾಗಲೇ ಜಿಲ್ಲೆಯ 2,00,000 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.
ಸೋಮವಾರ 195 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ತುಮಕೂರು ನಗರದಲ್ಲಿ 93, ಶಿರಾ ತಾಲೂಕಿನಲ್ಲಿ 24 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 1,423 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಐಸಿಯು ಬೆಡ್ಗಳಲ್ಲಿ ಸೋಂಕಿತರಿದ್ದು, ಬೆಡ್ಗಳ ಕೊರತೆ ಎದುರಾಗಿದೆ. ಹೀಗಾಗಿ ವ್ಯಾಕ್ಸಿನ್ ಪಡೆಯಲು ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 2,00,000 ಮಂದಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಜಿಲ್ಲೆಯಾದ್ಯಂತ ಪ್ರತಿದಿನ 25 ಸಾವಿರ ಮಂದಿಗೆ ವ್ಯಾಕ್ಸಿನ್ ನೀಡುವ ಗುರಿ ಹೊಂದಲಾಗಿದೆ.