ಕರ್ನಾಟಕ

karnataka

ETV Bharat / state

ಹೆದ್ದಾರಿಗೆ ಹೊಂದಿಕೊಂಡ ಗ್ರಾಮಗಳಲ್ಲಿ ಸ್ಕೈವಾಕ್​ ನಿರ್ಮಿಸಿ, ಅಪಘಾತ ತಡೆಗಟ್ಟಿ - ಪಾದಾಚಾರಿ ಮೇಲ್ಸೇತುವೆ

ಬೆಂಗಳೂರು-ಪುಣೆ ನಡುವಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕ್ಯಾತ್ಸಂದ್ರ ಗ್ರಾಮದ ವೃತ್ತದಲ್ಲಿ ಜನರು ಸುರಕ್ಷಿತವಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಚಾರಿ ಪೊಲೀಸರಿದ್ದರೂ ಯಾವುದೇ ಪ್ರಯೋಜನವಿಲ್ಲ ಎಂದು ಸಾರ್ವಜನಿಕರು ದೂರುತ್ತಾರೆ.

Circle
ಕ್ಯಾತ್ಸಂದ್ರ ಗ್ರಾಮದ ವೃತ್ತ

By

Published : Jan 8, 2021, 7:03 PM IST

ತುಮಕೂರು :ಜಿಲ್ಲೆಯಲ್ಲಿ ಹಾದು ಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಿರುವ ಅನೇಕ ಗ್ರಾಮಗಳಲ್ಲಿ ಪಾದಾಚಾರಿ ಮೇಲ್ಸೇತುವೆಗಳೇ ಇಲ್ಲ. ಇದರಿಂದಾಗಿ ಗ್ರಾಮಸ್ಥರು ರಸ್ತೆ ದಾಟಲು ಹರಸಾಹಸ ಪಡಬೇಕಾಗಿದೆ.

ಬೆಂಗಳೂರು-ಪುಣೆ ಮತ್ತು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿತ್ಯ ಸಾವಿರಾರು ಭಾರಿ ಮತ್ತು ಲಘು ವಾಹನಗಳು ಸಂಚರಿಸುತ್ತವೆ. ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಿಂತ ಅಧಿಕವಾಗಿರುತ್ತದೆ. ಹೀಗಾಗಿ, ರಸ್ತೆ ಪಕ್ಕಕ್ಕೂ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ...ಕೊರೊನಾ ಭೀತಿ ನಡುವೆಯೂ ಶಾಲೆ ಕಡೆ ಮುಖ ಮಾಡಿದ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಗಳು..

ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಪರ್ಯಾಯವಾಗಿ ಅಲ್ಲಲ್ಲಿ ಕೆಳ ಸೇತುವೆ ಮತ್ತು ಪಾದಾಚಾರಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗಿದೆ. ಈ ಸೌಲಭ್ಯ ಇಲ್ಲದ ಕಡೆ ಅಪಘಾತಗಳು ನಡೆದಿದ್ದು, ಎಷ್ಟೋ ಅಮಾಯಕ ಜನರು ಬಲಿಯಾಗಿದ್ದಾರೆ. ಈಗಲೂ ಕೆಲವರು ಶಾಶ್ವತ ಅಂಗವಿಕಲರಾಗಿದ್ದಾರೆ.

ವಾಹನ ನಡುವೆಯೇ ಜನರ ಓಡಾಟ

ಬೆಂಗಳೂರು-ಪುಣೆ ನಡುವಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕ್ಯಾತ್ಸಂದ್ರ ಗ್ರಾಮದ ವೃತ್ತದಲ್ಲಿ ಜನರು ಸುರಕ್ಷಿತವಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಚಾರಿ ಪೊಲೀಸರಿದ್ದರೂ ಯಾವುದೇ ಪ್ರಯೋಜನವಿಲ್ಲ ಎಂದು ಸಾರ್ವಜನಿಕರು ದೂರುತ್ತಾರೆ.

ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ರಸ್ತೆ ದಾಟಲು ಪಾದಾಚಾರಿ ಮೇಲ್ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಸ್ಕೈವಾಕ್​ ನಿರ್ಮಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎನ್ನುತ್ತಾರೆ ಸಾರ್ವಜನಿಕರು.

ABOUT THE AUTHOR

...view details