ತುಮಕೂರು: ಮನೆ ಕಳ್ಳತನ ಹಾಗೂ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದು ಲ್ಯಾಪ್ ಟಾಪ್, ಮೊಬೈಲ್, ಚಿನ್ನಾಭರಣ ದೋಚುತ್ತಿದ್ದ ಆರೋಪಿಯನ್ನು ಕುಣಿಗಲ್‌ನ ಅಮೃತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 52 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಖ್ಯಾತ ಮನೆಗಳ್ಳನ ಬಂಧನ: 52 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ - ದೇವನಹಳ್ಳಿ ಸುದ್ದಿ
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಠಾಣೆಯ ಪೊಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ.
ಕುಖ್ಯಾತ ಮನೆಗಳ್ಳನ ಬಂಧನ: 52ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ದೇವನಹಳ್ಳಿ ನಿವಾಸಿ ಬಿ.ಪಿ.ಲೋಕೇಶ್ ಆರೋಪಿಯಾಗಿದ್ದು ಈತನಿಂದ 52 ಲಕ್ಷ ರೂ. ಮೌಲ್ಯದ 663 ಗ್ರಾಂ ಚಿನ್ನಾಭರಣ ಮತ್ತು ಡೈಮಂಡ್ ಆಭರಣ, 4 ಲ್ಯಾಪ್ ಟಾಪ್, 4 ಮೊಬೈಲ್ ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಮೇಲೆ ಈಗಾಗಲೇ ಕ್ಯಾತ್ಸಂದ್ರ ಪೊಲೀಸ್ ಠಾಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ ವಿಜಯಪುರ ಪೊಲೀಸ್ ಠಾಣೆ ಹಾಗೂ ರಾಜನುಕುಂಟೆ ಪೊಲೀಸ್ ಠಾಣೆ, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ, ಮಂಡ್ಯ ಜಿಲ್ಲೆಯ ಬೆಳ್ಳೂರು ಪೊಲೀಸ್ ಠಾಣೆ ಹಾಗೂ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿದ್ದವು.