ತುಮಕೂರು:ಇನ್ಮುಂದೆ ನಗರದ ಯಾವುದೇ ಭಾಗದಲ್ಲಿ ಅಪರಾಧ ಚಟುವಟಿಕೆ ಹಾಗೂ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರು ಸಿಕ್ಕಿ ಬೀಳುವುದಂತೂ ಗ್ಯಾರಂಟಿ. ನಗರದಾದ್ಯಂತ 18 ಕಡೆ ವಿಶೇಷ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಹದ್ದಿನ ಕಣ್ಣಿರಿಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶೇಷ ಸೌಲಭ್ಯವನ್ನು ಜಾರಿಗೊಳಿಸಲಾಗಿದ್ದು, ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಕ್ರಮಕೈಗೊಳ್ಳಲಾಗಿದೆ. ಈ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಮೂಲಕ ಕಳ್ಳತನ ಪ್ರಕರಣಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಮುಖ್ಯವಾಗಿ ಟ್ರಾಫಿಕ್ ಸಿಗ್ನಲ್ ಇರುವ ಕಡೆ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸುಮಾರು 500 ಮೀಟರ್ ವರೆಗೂ ವಾಹನಗಳಲ್ಲಿನ ನಂಬರ್ ಪ್ಲೇಟ್ ಅನ್ನು ಸ್ಪಷ್ಟವಾಗಿ ದಾಖಲಿಸಬಹುದಾಗಿದೆ.