ತುಮಕೂರು:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸಿಇಒ ಶುಭಾ ಕಲ್ಯಾಣ್ ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ತುಮಕೂರು: ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಪ್ರತಿಜ್ಞಾವಿಧಿ ಸ್ವೀಕಾರ - ಪ್ರತಿಜ್ಞಾ ಸ್ವೀಕಾರ
ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ತುಮಕೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಕೆ.ಬಾಲಾಜಿ, ಪ್ರಪಂಚವನ್ನು ಕಾಡುತ್ತಿರುವ ಅನಕ್ಷರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಸೆಪ್ಟಂಬರ್ ತಿಂಗಳಲ್ಲಿ 7ರಿಂದ 14ರವರೆಗೆ ಅಂತಾರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಾಕ್ಷರತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಸಮಾಜದಲ್ಲಿ ಅಕ್ಷರವನ್ನು ಕಲಿಯದೆ, ವಂಚನೆಗೆ ಒಳಗಾದ, ತುಳಿತಕ್ಕೆ ಒಳಗಾದ ವರ್ಗವನ್ನು ಮೇಲೆತ್ತುವ ಪ್ರತಿಜ್ಞೆ ಮಾಡಲಾಗಿದೆ. ಸಾಕ್ಷರತಾ ಸಪ್ತಾಹದ ಮೂಲಕ ತುಮಕೂರು ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಅಕ್ಷರಸ್ಥರನ್ನಾಗಿಸಲಾಗಿದೆ. ಅದರಲ್ಲಿ ಪಂಚಾಯಿತಿಯ ಸದಸ್ಯರು ಶಿಕ್ಷಣ ಕಲಿತಿರುವುದು ನಮ್ಮ ಹೆಗ್ಗಳಿಕೆ ಎಂದರು.