ತುಮಕೂರು: ಕೋಡಿಹಳ್ಳಿ ಚಂದ್ರಶೇಖರ್ ವಸೂಲಿ ಕಾರ್ಯಕ್ರಮದವರು, ಹೋರಾಟವನ್ನು ದಿಕ್ಕು ತಪ್ಪಿಸಿ ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವವರು ಯಾವುದೇ ರೀತಿಯ ನ್ಯಾಯಯುತ ಹೋರಾಟಕ್ಕೆ ಮುಂದಾಗುವುದಿಲ್ಲ ಎಂದು ಕೆಎಸ್ಆರ್ಟಿಸಿ ಉಪಾಧ್ಯಕ್ಷ ಈಶ್ವರಪ್ಪ ಕಿಡಿಕಾರಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ವಸೂಲಿ ಕಾರ್ಯಕ್ರಮದವರು: ಕೆಎಸ್ಆರ್ಟಿಸಿ ಉಪಾಧ್ಯಕ್ಷ ಈಶ್ವರಪ್ಪ - ksrtc vice president alligation against kodihalli chandrashekhar
ಕೋಡಿಹಳ್ಳಿ ಚಂದ್ರಶೇಖರ್ ಹೋರಾಟಗಳನ್ನು ದಾರಿತಪ್ಪಿಸುವಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಕೆಎಸ್ಆರ್ಟಿಸಿ ಉಪಾಧ್ಯಕ್ಷ ಈಶ್ವರಪ್ಪ ಆರೋಪಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ರೈತರ ಸಾಲ ಮನ್ನಾ ಮಾಡಿಸುವುದಾಗಿ ಪ್ರತಿ ರೈತರಿಂದ 250ರೂ. ವಸೂಲಿ ಮಾಡಿದ್ದರು ಎಂದಿರುವ ಈಶ್ವರಪ್ಪ ಆ ಹಣ ಎಲ್ಲಿ ಎಂದು ಪ್ರಶ್ನಿಸಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆರೋಪ
ತುಮಕೂರಿನಲ್ಲಿ ಈ ಹೇಳಿಕೆ ನೀಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ಹೋರಾಟಗಳನ್ನು ದಾರಿತಪ್ಪಿಸುವಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರೈತರ ಸಾಲ ಮನ್ನಾ ಮಾಡಿಸುವುದಾಗಿ ಪ್ರತಿ ರೈತರಿಂದ 250ರೂ. ವಸೂಲಿ ಮಾಡಿದ್ದ ಕೋಡಿಹಳ್ಳಿ ಚಂದ್ರಶೇಖರ್, ಆ ಹಣ ಎಲ್ಲಿ ಹೋಯಿತು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ರು.
ಈಗಾಗಲೇ ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಸಾಕಷ್ಟು ನಷ್ಟ ಅನುಭವಿಸಿದೆ. ಇಂತಹ ಸಂದರ್ಭದಲ್ಲಿ ನೌಕರರು ತಮ್ಮ ಬೇಡಿಕೆಗಳನ್ನು ಮುಂದಿಡುವುದು ಸರಿಯಲ್ಲ ಎಂದು ಈಶ್ವರಪ್ಪ ಹೇಳಿದ್ರು.