ತುಮಕೂರು:ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಎಂಬುವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ತುಮಕೂರಿನ ಗಂಗೋತ್ರಿ ಬಡಾವಣೆಯ ಅರಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ತಡರಾತ್ರಿ ಸುಮಾರು 12 ಗಂಟೆಯವರೆಗೂ ರಾಯಸಂದ್ರ ರವಿಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದರು.
ಹಾಗೆಯೇ ರವಿಕುಮಾರ್ ಅವರಿಗೆ ಸೇರಿದ ತುರುವೇಕೆರೆ ತಾಲೂಕಿನ ರಾಯಸಂದ್ರ ಗ್ರಾಮದ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಇವರು ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತ ಎಂದು ತಿಳಿದು ಬಂದಿದೆ.
ಐಟಿ ದಾಳಿ ಕುರಿತು ತಿಳಿಸಿದ ಕಾಂಗ್ರೆಸ್ ಮುಖಂಡ ರವಿಕುಮಾರ್ ರವಿಕುಮಾರ್ ಅವರು ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಶಂಕೆಯನ್ನು ರವಿಕುಮಾರ್ ವ್ಯಕ್ತಪಡಿಸಿದ್ದಾರೆ.