ಕರ್ನಾಟಕ

karnataka

ETV Bharat / state

ತುಮಕೂರಿನ 2 ತಾಲೂಕುಗಳಲ್ಲಿ ಲಾಕ್​ಡೌನ್​​ ಸಡಿಲಿಕೆ: ಸಚಿವ ಮಾಧುಸ್ವಾಮಿ - maduswamy latest news

ಕೋವಿಡ್-19 ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಲಾಕ್​ಡೌನ್​ ಸಡಿಲಿಸಲು ತೀರ್ಮಾನ ಕೈಗೊಳ್ಳಲಾಯಿತು.

J. C Madhu swamy
ಸಚಿವ ಜೆ.ಸಿ.ಮಾಧುಸ್ವಾಮಿ

By

Published : May 1, 2020, 5:04 PM IST

ತುಮಕೂರು:ಜಿಲ್ಲೆಯ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ ಉಳಿದಂತೆ 8 ತಾಲೂಕುಗಳಲ್ಲಿ ಮೇ 3ರವರೆಗೆ ಲಾಕ್​ಡೌನ್​ ಮುಂದುವರೆಸಲು ನಿರ್ಧರಿಸಲಾಗಿದೆ.

ಕೋವಿಡ್-19 ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಆಯಾ ಕ್ಷೇತ್ರಗಳ ಶಾಸಕರು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣದ ಕುರಿತು ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಕ್ಕೆ ತೀರ್ಮಾನಿಸಲಾಗಿದೆ. ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಯಾವುದೇ ಪ್ರಕರಣಗಳು ಈವರೆಗೆ ಕಂಡು ಬಾರದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಲಾಕ್​ಡೌನ್ ಸಡಿಲಿಕೆಗೆ ತೀರ್ಮಾನಿಸಲಾಗಿದೆ. ಆದರೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ABOUT THE AUTHOR

...view details