ತುಮಕೂರು:ಜಿಲ್ಲೆಯ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಜಾನುವಾರು ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಜಾನುವಾರುಗಳಿಗೆ ಬೇಡಿಕೆ ಹೆಚ್ಚಿದ್ದು, ರೈತರು ಖರೀದಿಗೆ ಮುಗಿಬಿದ್ದ ದೃಶ್ಯ ಸರ್ವೇ ಸಾಮಾನ್ಯವಾಗಿತ್ತು.
ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಜಾನುವಾರು ಜಾತ್ರೆಗೆ ರಾಮನಗರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದ ರೈತರು ಆಗಮಿಸುತ್ತಿದ್ದು, ಅವರು ಹೆಚ್ಚಾಗಿ ಹಳ್ಳಿಕಾರ್ ತಳಿಯ ರಾಸುಗಳನ್ನೇ ಖರೀದಿಸುತ್ತಿದ್ದಾರೆ. ಹೀಗಾಗಿ ಸಿದ್ಧಗಂಗಾ ಮಠದ ಜಾನುವಾರು ಜಾತ್ರೆಯಲ್ಲಿ ಹಳ್ಳಿಕಾರ್ ತಳಿಗೆ ಬಹು ಬೇಡಿಕೆ ಬಂದಿದೆ. ರಾಜ್ಯ ಮಾತ್ರವಲ್ಲದೇ ನೆರೆಯ ಆಂಧ್ರಪ್ರದೇಶ ಸೇರಿದಂತೆ ದೂರದ ಊರುಗಳಿಂದ ರೈತರು ಜಾತ್ರೆಗೆ ಆಗಮಿಸಿ, ಹಸುಗಳನ್ನು ಖರೀದಿಸುತ್ತಿದ್ದಾರೆ.