ತುಮಕೂರು :ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಪೈಕಿ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದ್ದು, ರಾಜಕೀಯ ಚಟುವಟಿಕೆ ಗದಿಗೆದರಿದೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ಎರಡು ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸೋಲು ಕಂಡಿರುವ ಗೋವಿಂದರಾಜು ಅವರನ್ನು ಪುನಃ ಕಣಕ್ಕಿಳಿಸಲು ಪಕ್ಷದ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಉಳಿದ ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..
- ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್,
- ಮಧುಗಿರಿ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಜೆಡಿಎಸ್ ಶಾಸಕ ವೀರಭದ್ರಯ್ಯ,
- ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಜೆಡಿಎಸ್ ಶಾಸಕ ಡಿ.ನಾಗರಾಜಯ್ಯ,
- ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ,
- ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಸುಧಾಕರ್ ಲಾಲ್,
- ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಸುರೇಶ್ ಬಾಬು,
- ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ತಿಮ್ಮರಾಯಪ್ಪ ಅವರ ಹೆಸರನ್ನು ಜೆಡಿಎಸ್ ಪಕ್ಷ ಘೋಷಣೆ ಮಾಡಿದೆ.
ಇನ್ನು, ಶಿರ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡದೆ ತಡೆಹಿಡಿಯಲಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗುವ ವಿಶ್ವಾಸದಲ್ಲಿರುವ ಎಲ್ಲರೂ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ನಡೆಸಿದ್ದಾರೆ.