ಕರ್ನಾಟಕ

karnataka

ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ : ಯಡಿಯೂರಪ್ಪ

ನಾವೇನು ಸನ್ಯಾಸಿಗಳೇ, ಸ್ಪೀಕರ್ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುರಿತು ಮಾಹಿತಿ ಹೊರ ಬಿದ್ದ ನಂತರ ನಾವೆಲ್ಲ ಕುಳಿತು ಚರ್ಚೆ ಮಾಡಲಿದ್ದೇವೆ - ಬಿ.ಎಸ್.ಯಡಿಯೂರಪ್ಪ.

By

Published : Jul 7, 2019, 12:50 PM IST

Published : Jul 7, 2019, 12:50 PM IST

ತುಮಕೂರಿನ ಕ್ಯಾತ್ಸಂದ್ರದ ಬಳಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.

ತುಮಕೂರು:ರಾಜ್ಯದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಜುಲೈ 12 ರಂದು ವಿಧಾನಸಭೆಯ ಅಧಿವೇಶನವನ್ನು ಕರೆಯಲಾಗಿದೆ. ಮುಖ್ಯಮಂತ್ರಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಸ್ಪೀಕರ್ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರದ ಬಳಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.

ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತುಮಕೂರು ನಗರದ ಹೊರವಲಯದಲ್ಲಿರುವ ಕ್ಯಾತ್ಸಂದ್ರ ಬಳಿ ಪತ್ರಕರ್ತರೊಂದಿಗೆ ಮಾತನಾಡಿ, ನಾವೇನು ಸನ್ಯಾಸಿಗಳೇ, ಸ್ಪೀಕರ್ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುರಿತು ಮಾಹಿತಿ ಹೊರ ಬಿದ್ದ ನಂತರ ನಾವೆಲ್ಲ ಕುಳಿತು ಚರ್ಚೆ ಮಾಡಲಿದ್ದೇವೆ ಎಂದರು.

ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷದ ಹೈಕಮಾಂಡ್ ಹಾಗೂ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾದುನೋಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಜಿ. ಎಸ್. ಬಸವರಾಜು, ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

For All Latest Updates

TAGGED:

ABOUT THE AUTHOR

...view details