ತುಮಕೂರು: ಚುನಾವಣಾ ಆಯೋಗದ ಸೂಚನೆ ಮೇರೆಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಪಕ್ಷದ ಚಿಹ್ನೆ ಆಗಲಿ, ಮುಖಂಡರ ಭಾವಚಿತ್ರಗಳನ್ನು ಬಳಸದಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳಿಗೆ ಕಾನೂನು ಸಾಕಷ್ಟು ಇರುತ್ತದೆ. ಆದರೆ, ಚುನಾವಣಾ ಆಯೋಗದ ಸೂಚನೆಯನ್ನು ಪಾಲನೆ ಮಾಡಬೇಕಾಗಿದೆ ಎಂದು ತಿಳಿಸಿದರು.