ತುಮಕೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ ಶಿರಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಶಾಸಕ ಸತ್ಯನಾರಾಯಣ ಅಂತಿಮ ದರ್ಶನ ಪಡೆದ ಜೆಡಿಎಸ್ ಮುಖಂಡರು - ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದ ಶಿರಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರ ಪಾರ್ಥೀವ ಶರೀರಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸೇರಿದಂತೆ ಇತರೆ ನಾಯಕರು ಅಂತಿಮ ನಮನ ಸಲ್ಲಿಸಿದರು.
![ಶಾಸಕ ಸತ್ಯನಾರಾಯಣ ಅಂತಿಮ ದರ್ಶನ ಪಡೆದ ಜೆಡಿಎಸ್ ಮುಖಂಡರು JDS Senior HD Deve Gowda](https://etvbharatimages.akamaized.net/etvbharat/prod-images/768-512-8303870-536-8303870-1596622168195.jpg)
ಅಂತಿಮ ದರ್ಶನ ಪಡೆದ ಜೆಡಿಎಸ್ ಮುಖಂಡರು
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಚಿವ ಶ್ರೀನಿವಾಸ್, ಜೆಡಿಎಸ್ ಶಾಸಕರಾದ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದುಕೊಂಡರು.
ಅಂತಿಮ ದರ್ಶನ ಪಡೆದ ಜೆಡಿಎಸ್ ಮುಖಂಡರು
ಇದೇ ವೇಳೆ ಮಾತನಾಡಿದ ಬಸವರಾಜ್ ಹೊರಟ್ಟಿ, ಸತ್ಯನಾರಾಯಣ ಅವರೊಂದಿಗೆ ಸುದೀರ್ಘ ಅವಧಿಯವರೆಗೆ ಒಡನಾಟ ಹೊಂದಿದ್ದೆ. ಅವರ ನಿಧನ ಸಾಕಷ್ಟು ನೋವು ತಂದಿದೆ ಎಂದರು.