ತುಮಕೂರು:ತುಮಕೂರು ಗ್ರಾಮಾಂತರ ಶಾಸಕ ಡಿ ಸಿ ಗೌರಿಶಂಕರ್ ಕ್ಷೇತ್ರದಲ್ಲಿ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಬೆಂಬಲಿಗರು ಸುಳ್ಳು ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಅನಂತ್ ಕುಮಾರ್ ಆರೋಪಿಸಿದ್ದಾರೆ.
ಶಾಸಕ ಗೌರಿಶಂಕರ್ ವಿರುದ್ಧ ಟ್ರೋಲ್ ... ಜೆಡಿಎಸ್ ಕಾರ್ಯಕರ್ತರ ಆಕ್ರೋಶ - tumkur
ತುಮಕೂರಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ತಮ್ಮ ನಾಯಕರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮುಖಾಂತರ ವಾರ್ ಶುರು ಮಾಡಿಕೊಂಡಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುರೇಶ್ ಗೌಡ ಫ್ಯಾನ್ಸ್ ಕ್ಲಬ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಶಾಸಕ ಗೌರಿಶಂಕರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು. ಅದಕ್ಕೆ ಪ್ರತ್ಯುತ್ತರವಾಗಿ ಜೆಡಿಎಸ್ ಕಾರ್ಯಕರ್ತರು ಮರು ಪೋಸ್ಟ್ ಮಾಡಿದ್ದಾರೆ. ಆದರೆ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಡೆದಿರುವ ಪರ-ವಿರೋಧ ಹೇಳಿಕೆಗಳಿಗೂ ಮತ್ತು ಶಾಸಕ ಗೌರಿಶಂಕರ್ಗೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ವಿನಾಕಾರಣ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
10,000 ಮಹಿಳೆಯರನ್ನು ಸೇರಿಸಿ ನಾವು ಕೂಡ ನಿಮ್ಮ ವಿರುದ್ಧ ಪ್ರತಿಭಟನೆ ಮಾಡುವ ಶಕ್ತಿ ಇದೆ ಎಂದು ಮಾಜಿ ಶಾಸಕ ಸುರೇಶ್ ಗೌಡಗೆ ಎಚ್ಚರಿಕೆ ನೀಡಿದರು. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳಷ್ಟಿದೆ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಗಮನ ಹರಿಸದೆ. ಬಿಜೆಪಿ ಜಿಲ್ಲಾ ಪಂಚಾಯಿತಿ ಮಹಿಳಾ ಸದಸ್ಯೆ ಮತ್ತು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಹಿರೇಹಳ್ಳಿ ಮಹೇಶ್ , ಹೆಚ್ ಕೆಂಪರಾಜು, ಬೆಳಗುಂಬ ವೆಂಕಟೇಶ್, ಲಕ್ಷ್ಮಿ ನರಸಿಂಹ ಹಾಜರಿದ್ದರು.
TAGGED:
tumkur