ತುಮಕೂರು :ಗುಬ್ಬಿ ತಾಲೂಕಿನ ಸಿಎಸ್‌ಪುರ ಹೋಬಳಿಯ ಇಡಗೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗುತ್ತಿಗೆದಾರೊಬ್ಬರು ಕಂಪ್ಯೂಟರ್ ಬಳಕೆ ಮಾಡಿದ್ದನ್ನು ಪ್ರಶ್ನಿಸಿದ ಜೆಡಿಎಸ್ ಕಾರ್ಯಕರ್ತನ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ನೇತೃತ್ವದಲ್ಲಿ ಸಿಎಸ್‌ಪುರ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಲಾಯಿತು.
ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಆರೋಪ.. ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ - JDS activist
ಶಾಸಕ ಮಸಾಲೆ ಜಯರಾಮ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ವ್ಯವಸ್ಥಿತವಾಗಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸ್ ಬಲ ಪ್ರಯೋಗಿಸಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು..
ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಆರೋಪ: ಮಸಾಲೆ ಜಯರಾಮ್ ವಿರುದ್ಧ ಪ್ರತಿಭಟನೆ
ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಪೊಲೀಸ್ ಮನೆ ಎದುರು ಧರಣಿ ನಡೆಸಲಾಯಿತು. ಶಾಸಕ ಮಸಾಲೆ ಜಯರಾಮ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ವ್ಯವಸ್ಥಿತವಾಗಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸ್ ಬಲ ಪ್ರಯೋಗಿಸಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್ ಕಾರ್ಯಕರ್ತರ ಮೇಲೆ ವಿನಾಕಾರಣ ಪೊಲೀಸರ ಮೂಲಕ ಕಿರುಕುಳ ನೀಡುವುದನ್ನು ತಪ್ಪಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.