ತುಮಕೂರು: ನ. 30ರಂದು ಮಠದ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ನಿರುದ್ಯೋಗಿಗಳು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿದ್ಧರ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನ. 30ರಂದು ಸಿದ್ಧರ ಬೆಟ್ಟ ರೋಟರಿ ಸಂಸ್ಥೆಯಿಂದ ಉದ್ಯೋಗ ಮೇಳ - Job Fair in tumkur
ನ. 30ರಂದು ಸಿದ್ಧರ ಬೆಟ್ಟ ರೋಟರಿ ಸಂಸ್ಥೆ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಿದ್ಧರ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 30ರಂದು ಮಠದ ಆವರಣದಲ್ಲಿ ಸಿದ್ಧರ ಬೆಟ್ಟ ರೋಟರಿ ಸಂಸ್ಥೆ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ 60ರಿಂದ 70 ಕಂಪನಿಗಳು ಭಾಗವಹಿಸಲಿದ್ದು, ಸುಮಾರು 5 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಅವಕಾಶವಿದೆ ಎಂದರು. ಮಧುಗಿರಿ, ಕೊರಟಗೆರೆ ಹಾಗೂ ಅಕ್ಕಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, 7ನೇ ತರಗತಿಯಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಪದವಿ, ಎಂಜಿನಿಯರ್ ವಿದ್ಯಾರ್ಥಿಗಳಿಗೂ ಉದ್ಯೋಗ ಸಿಗಲಿದೆ ಎಂದರು.
ಉದ್ಯೋಗಮೇಳದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಮಠದ ವತಿಯಿಂದ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.