ತುಮಕೂರು: ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ದತಿ ವಿರುದ್ಧ ಜನಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಚಾಲನೆ ನೀಡಿದರು.
ತುಮಕೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಆಂದೋಲನ
ತುಮಕೂರು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ದತಿ ವಿರುದ್ಧ ಜನ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಚಾಲನೆ ನೀಡಿದರು.
ತುಮಕೂರು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಘವೇಂದ್ರ ಶೆಟ್ಟಿಗಾರ್, ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವ ಯೋಜನೆಯ ಬಗ್ಗೆ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ವಾಹನಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.
ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಉದ್ದೇಶ ತಮ್ಮ ಬಾಲ್ಯಾವಸ್ಥೆಯನ್ನು ಕಳೆದುಕೊಂಡು ಶಿಕ್ಷಣದಿಂದ ವಂಚಿತರಾಗುತ್ತಿರುವ ಬಾಲಕರಿಗೆ ನ್ಯಾಯ ದೊರಕಿಸಿಕೊಡಲು ಹೋರಾಡಬೇಕೆಂಬ ಜಾಗೃತಿ ಮೂಡಿಸುವುದು. ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಮಹತ್ವ ಅರಿತುಕೊಂಡು ಬಾಲ ಕಾರ್ಮಿಕ ಪದ್ಧತಿಯನ್ನು ನಿಷೇಧಿಸುವಲ್ಲಿ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಬೇಕಿದೆ ಎಂದರು.