ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳು ಅಗತ್ಯ: ಎಸ್. ಪಿ. ಮುದ್ದಹನುಮೇಗೌಡ - ರಾಜ್ಯ ಸರ್ಕಾರ ಇಗಾಗಲೇ ಕ್ರಮ

ದೇಶದಲ್ಲಿ ತಲ್ಲಣವನ್ನುಂಟು ಮಾಡಿರುವ ಕೊರೊನಾ ವೈರಸ್‌ ಬಗ್ಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದ್ದರೂ ಸಹ ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದುರಾದೃಷ್ಟ ವಿಷಯವೆಂದರೆ ಕೊರೊನಾಗೆ ದೇಶದಲ್ಲಿಯೇ ಮೊದಲ ಸಾವು ಕರ್ನಾಟಕದಲ್ಲಾಗಿದೆ. ಸರ್ಕಾರ ಇನ್ನೂ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಿದೆ ಎಂದು ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಹೇಳಿದ್ದಾರೆ.

ಎಸ್. ಪಿ. ಮುದ್ದಹನುಮೇಗೌಡ
ಎಸ್. ಪಿ. ಮುದ್ದಹನುಮೇಗೌಡ

By

Published : Mar 17, 2020, 6:46 PM IST

ತುಮಕೂರು:ಕೊರೊನಾಗೆ ದೇಶದಲ್ಲಿಯೇ ಮೊದಲ ಸಾವು ಕರ್ನಾಟಕದಲ್ಲಿ ಸಂಭವಿಸಿರುವುದು ದುರಾದೃಷ್ಟ. ಹಾಗಾಗಿ ಸರ್ಕಾರ ಇನ್ನೂ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಿದೆ ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ವಿಷಯದಲ್ಲಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಸಾರ್ವಜನಿಕ ಪ್ರದೇಶಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದರು.

ಇನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಿದ ಮಾಜಿ ಸಂಸದರು, ರಾಜ್ಯಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಅಳೆದು-ತೂಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ ಎಂದು ಅಭಿಪ್ರಾಯಪಟ್ಟರು.

ಮಾಧ್ಯದವರೊಂದಿಗೆ ಮಾತನಾಡಿದ ಎಸ್. ಪಿ. ಮುದ್ದಹನುಮೇಗೌಡ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಗುಂಪು ಡಿ.ಕೆ. ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ನಿಟ್ಟಿನಲ್ಲಿ ವಿರೋಧಿಸಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುದ್ದಹನುಮೇಗೌಡರು, ಪ್ರಜಾಪ್ರಭುತ್ವದಲ್ಲಿ ಪರ-ವಿರೋಧ ಇರುತ್ತದೆ. ಪಕ್ಷದಲ್ಲಿ ಇರುವವರಿಗೆ ಇಲ್ಲಿಯವರೆಗೂ ಯಾವುದೇ ರೀತಿಯ ಅಸಮಾಧಾನ, ಅತೃಪ್ತಿ ಮೂಡಿಬಂದಿಲ್ಲ. ನೂತನ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಎಲ್ಲರನ್ನೂ ಭೇಟಿ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ABOUT THE AUTHOR

...view details