ತುಮಕೂರು: ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ಬಿದ್ದಿದ್ದು ರೈತರಿಗೆ ಅಗತ್ಯವಿರುವ ಯೂರಿಯಾ ಕೃತಕ ಅಭಾವ ಸೃಷ್ಟಿ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಇಂದು ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯೆದುರು ಪ್ರತಿಭಟನೆ ನಡೆಸಿದರು.
ತುಮಕೂರು ಜಿಲ್ಲೆಯಲ್ಲಿ 'ಯೂರಿಯಾ ಕೃತಕ ಅಭಾವ' ಸೃಷ್ಟಿ; ರೈತ ಸಂಘ ಆರೋಪ - Karnataka State Farmers Association
ಲಭ್ಯವಿರುವ ಯೂರಿಯಾವನ್ನು ದುಪ್ಪಟ್ಟು ಬೆಲೆಗೆ ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದಿಂದ 'ಯೂರಿಯಾ ಕೃತಕ ಅಭಾವ' ಆರೋಪ...
ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಲಭ್ಯವಿರುವ ಯೂರಿಯಾವನ್ನು ದುಪ್ಪಟ್ಟು ಬೆಲೆಗೆ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಇನ್ನೊಂದೆಡೆ ಯೂರಿಯಾ ಬೇಕಿದ್ದರೆ ಮತ್ತೊಂದು ಸಾಮಗ್ರಿಯನ್ನು ಖರೀದಿಸಲೇಬೇಕು ಎಂಬ ಷರತ್ತು ವಿಧಿಸಲಾಗುತ್ತಿದೆ. ಈ ಮೂಲಕ ರೈತರನ್ನು ಆತಂಕಕ್ಕೆ ಒಳಗಾಗಿಸಲಾಗುತ್ತಿದೆ ಎಂದು ಆರೋಪಿಸಿದರು.
ಕೃಷಿ ಇಲಾಖೆ ಅಧಿಕಾರಿಗಳು ಇಂತಹ ಯೂರಿಯಾ ಸಮಸ್ಯೆ ತಲೆದೋರಿದ್ದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ಕೂಡ ನಿರ್ಲಕ್ಷ್ಯ ಭಾವನೆ ತೋರುತ್ತಿದೆ ಎಂದು ದೂರಿದರು.