ತುಮಕೂರು: ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಹೊರಗಡೆಯಿಂದ ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾದಲ್ಲಿಡಲಾಗಿತ್ತು. ಈ ಪೈಕಿ 326 ಜನರ ವರದಿ ನೆಗೆಟಿವ್ ಬಂದಿದೆ.
ಕೋವಿಡ್ 19: ತುಮಕೂರು ಜಿಲ್ಲೆಯಲ್ಲಿ 326 ಮಾದರಿ ನೆಗೆಟಿವ್
ತುಮಕೂರಿಗೆ ಬಂದಿದ್ದ 480 ಜನರನ್ನು ತೀವ್ರ ನಿಗಾದಲ್ಲಿಡಲಾಗಿತ್ತು. ಈ ಪೈಕಿ 326 ಜನರ ವರದಿ ನೆಗೆಟಿವ್ ಬಂದಿದೆ. 4 ಮಾದರಿಗಳು ತಿರಸ್ಕತಗೊಂಡಿವೆ. 59 ಮಂದಿಯ ತಪಾಸಣೆ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.
70 ಮಂದಿಯನ್ನು ಹೋಮ್ ಕ್ವಾರೆಂಟೈನ್ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬಾರದೆಂದು ಸೂಚಿಸಲಾಗಿದೆ. ಒಟ್ಟು 195 ಮಂದಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ನಲ್ಲಿ ಇಡಲಾಗಿದೆ. 300 ಜನರ 28 ದಿನಗಳ ಹೋಮ್ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ.
ಇದುವರೆಗೂ 391 ಜನರ ಗಂಟಲು ಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಸಿರಾ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 4 ಮಾದರಿಗಳು ತಿರಸ್ಕತಗೊಂಡಿವೆ. 59 ಮಂದಿಯ ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.