ತುಮಕೂರು:ಜಿಲ್ಲೆಯ 183 ಮಂದಿಯ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.
ತುಮಕೂರಲ್ಲಿ 183 ಕೊರೊನಾ ಶಂಕಿತರ ವರದಿ ನಿರೀಕ್ಷೆ: ಜಿಲ್ಲಾ ಆರೋಗ್ಯಾಧಿಕಾರಿ - Kovid-19
ತುಮಕುರು ಜಿಲ್ಲೆಯಲ್ಲಿ ಇದುವರೆಗೂ 1078 ಜನರನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 370 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. 183 ಮಂದಿಯ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.

ಕೊರೊನಾ
480 ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಪರೀಕ್ಷಿಸಲಾಗಿದ್ದು, ಎಲ್ಲರೂ ಹೋಮ್ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಒಟ್ಟು 395 ಮಂದಿಯನ್ನು ಐಸೋಲೇಷನ್ನಲ್ಲಿಡಲಾಗಿದ್ದು, 370 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ.
ಈವರೆಗೂ 1078 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 884 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.