ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರ ಜನರ ಪಿಕ್​ ಪಾಕೆಟ್ ಮಾಡಿದೆ: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ - ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸುದ್ದಿ

ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.

ಕೇಂದ್ರದ ವಿರುದ್ಧ ಡಿಕೆಶಿ ಕಿಡಿ
ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

By

Published : Jun 12, 2021, 12:22 PM IST

Updated : Jun 12, 2021, 1:04 PM IST

ತುಮಕೂರು: ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಜನರ ಪಿಕ್​ ಪಾಕೆಟ್ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಜಿಲ್ಲೆಯ ಶಿರಾ ಪಟ್ಟಣದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ ಡಿ.ಕೆ.ಶಿವಕುಮಾರ್, ಜನರ ಜೇಬಿನಿಂದ ಕಳ್ಳತನ ಮಾಡಿರುವ ಹಣವನ್ನು ಜನರಿಗೆ ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.

ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ನಿರಂತರವಾಗಿ ತಾಲೂಕುಮಟ್ಟ, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.

Last Updated : Jun 12, 2021, 1:04 PM IST

ABOUT THE AUTHOR

...view details